ಕ್ರಿಶ್ಚಿಯನ್ ಸಮುದಾಯಕ್ಕೆ ಸಾಲ ಮತ್ತು ಸಹಾಯಧನ: ಅರ್ಜಿ ಸಲ್ಲಿಸಲು ಡಿ. 15ರವರೆಗೆ ಅವಧಿ ವಿಸ್ತರಣೆ

Spread the love

ಧಾರವಾಡ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳ್ಳುತ್ತಿರುವ ವಿವಿಧ ಸಾಲ ಮತ್ತು ಸಹಾಯಧನ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 15, 2025 ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ. ಕ್ರಿಶ್ಚಿಯನ್ ಸಮುದಾಯದ ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಅವಕಾಶ ಬಳಸಿಕೊಳ್ಳಬಹುದು.

​ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ನಿಗಮವು ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಅರಿವು ವಿದ್ಯಾಭ್ಯಾಸ ಸಾಲ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಶ್ರಮಶಕ್ತಿ ಯೋಜನೆ, ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ, ವೃತ್ತಿ ಪ್ರೋತ್ಸಾಹ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ವ್ಯಾಪಾರ/ಉದ್ದಿಮೆಗಳಿಗೆ ನೇರಸಾಲ ಯೋಜನೆ ಹಾಗೂ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಗಳು ಪ್ರಮುಖವಾಗಿವೆ.

​ಅರ್ಹ ಅಭ್ಯರ್ಥಿಗಳು ಡಿಸೆಂಬರ್ 15, 2025 ರೊಳಗಾಗಿ ನಿಗಮದ ಅಧಿಕೃತ ವೆಬ್‌ಸೈಟ್ ಆದ www.kccdclonline.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2748226 ಗೆ ಸಂಪರ್ಕಿಸಬಹುದೆಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *