ಶಿವಮೊಗ್ಗದಲ್ಲಿ ಬೆಂಳ್ಳಬೆಳಗ್ಗೆ ಲೋಕಾಯುಕ್ತ ದಾಳಿ: ಭ್ರಷ್ಟ ಅಧಿಕಾರಿಗಳಿಗೆ ಶಾಕ್!

Spread the love

ಶಿವಮೊಗ್ಗ, ನ. 25 : ಭ್ರಷ್ಟಾಚಾರದ ಆರೋಪ ಹೊತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆದ ದಾಳಿಯ ಭಾಗವಾಗಿ ಶಿವಮೊಗ್ಗದಲ್ಲಿಯೂ ಲೋಕಾಯುಕ್ತ ಕಾರ್ಯಾಚರಣೆ ನಡೆದಿದೆ.

​ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ ಎಸ್.ಐ.ಎಂ.ಎಸ್. (SIMS) ಮೆಡಿಕಲ್ ಕಾಲೇಜಿನ ಎಫ್.ಡಿ.ಎ. (ಪ್ರಥಮ ದರ್ಜೆ ಸಹಾಯಕರಾದ) ಲಕ್ಷ್ಮೀಪತಿ ಸಿ.ಎನ್. ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

​ಬೆಂಗಳೂರು, ಮಂಡ್ಯ, ಬೀದರ್, ಮೈಸೂರು, ಧಾರವಾಡ ಸೇರಿದಂತೆ ರಾಜ್ಯದ ಒಟ್ಟು 10 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದ್ದು, ಭ್ರಷ್ಟಾಚಾರ ಆರೋಪ ಹೊತ್ತಿರುವ ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ಲೋಕಾಯುಕ್ತ ಪೊಲೀಸರ ತಂಡಗಳು ತೀವ್ರ ಶೋಧ ನಡೆಸುತ್ತಿವೆ. ಈ ಸಂಬಂಧ ಹೆಚ್ಚಿನ ದಾಖಲೆಗಳ ಪರಿಶೀಲನೆ ಮುಂದುವರೆದಿದೆ.

Leave a Reply

Your email address will not be published. Required fields are marked *