ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್‌ ಮಾಧ್ಯಮ ವಕ್ತಾರರಾಗಿ ಮರಸಪ್ಪ ರವಿ ನೇಮಕ

Spread the love


ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್‌ ಸಮಿತಿಯ (ಡಿಸಿಸಿ) ಮಾಧ್ಯಮ ವಕ್ತಾರರಾಗಿ ಕನಕಪುರ ಪಟ್ಟಣದ ಮಳಗಾಳಿನ ಮರಸಪ್ಪ ರವಿ ಅವರು ನೇಮಕಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ, ಕೆಪಿಸಿಸಿ ಮಾಧ್ಯಮ ವಕ್ತಾರರು ಹಾಗೂ ವಿಧಾನ ಪರಿಷತ್ ಸದಸ್ಯರಾದ ರಮೇಶ್ ಬಾಬು ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಮರಸಪ್ಪ ರವಿ ಅವರು ಈ ಹಿಂದೆ ಸುದೀರ್ಘ ಅವಧಿಯವರೆಗೆ ರಾಮನಗರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು. ಅವರ ಅನುಭವ ಮತ್ತು ಪಕ್ಷನಿಷ್ಠೆಯನ್ನು ಪರಿಗಣಿಸಿ ಕೆಪಿಸಿಸಿ ಮಾಧ್ಯಮ ವಿಭಾಗವು ಇದೀಗ ಬೆಂಗಳೂರು ದಕ್ಷಿಣ ಜಿಲ್ಲಾ ಜವಾಬ್ದಾರಿಯನ್ನು ನೀಡಿ ಮುಂದುವರಿಸಿದೆ.

ತಮ್ಮ ನೇಮಕಾತಿಯ ಕುರಿತು ಸಂತಸ ವ್ಯಕ್ತಪಡಿಸಿರುವ ಮರಸಪ್ಪ ರವಿ ಅವರು, ಈ ಜವಾಬ್ದಾರಿ ನೀಡಿದ ಡಿ.ಕೆ. ಶಿವಕುಮಾರ್ ಹಾಗೂ ರಮೇಶ್ ಬಾಬು ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಇನ್ನು ಹೊಸ ಜವಾಬ್ದಾರಿ ವಹಿಸಿಕೊಂಡಿರುವ ಅವರಿಗೆ ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ವರದಿ: ಬಂಗಾರಪ್ಪ ಸಿ.


Leave a Reply

Your email address will not be published. Required fields are marked *