ಸೋಮವಾರ, 23 Nov 2026 | ಕನ್ನಡ & ರಾಷ್ಟ್ರೀಯ ಸುದ್ದಿ ಪೋರ್ಟಲ್
ಬೆಳಗಾವಿ

ಬೋರಗಾಂವ್-ಭಾಟನಾಗನೂರ ರಸ್ತೆ ಸುಧಾರಣೆ ಕಾಮಗಾರಿಗೆ ಸಂಸದೆ ಪ್ರಿಯಾಂಕ ಜಾರಕಿಹೊಳಿ ಚಾಲನೆ

30-ಸೆಕೆಂಡ್ ಮುಖ್ಯಾಂಶಗಳು (30-Sec AI Summary)
  • ಪ್ರಮುಖ ಬೆಳವಣಿಗೆ: ಬೋರಗಾಂವ್-ಭಾಟನಾಗನೂರ ರಸ್ತೆ ಸುಧಾರಣೆ ಕಾಮಗಾರಿಗೆ ಸಂಸದೆ ಪ್ರಿಯಾಂಕ ಜಾರಕಿಹೊಳಿ ಚಾಲನೆ
  • Spread the love Recent Views 46 ಬೆಳಗಾವ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕ ಜಾರಕಿಹೊಳಿ ಅವರು, ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಬೋರಗಾಂವ್ ವೃತ್ತದಲ್ಲಿ ₹3.50…
  • ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಸ್ಥಳೀಯ ಮೂಲಗಳಿಂದ ಸಮಗ್ರ ವರದಿ ಪರಿಶೀಲನೆ.
ಸುದ್ದಿ ಆಲಿಸಿ • ಸಿದ್ಧವಾಗಿದೆ (Ready)
AI ಆಡಿಯೋ ನ್ಯೂಸ್‌ರೂಮ್ • ಕನ್ನಡ & English
ವೇಗ:
Spread the love

ಬೆಳಗಾವ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕ ಜಾರಕಿಹೊಳಿ ಅವರು, ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಬೋರಗಾಂವ್ ವೃತ್ತದಲ್ಲಿ ₹3.50 ಕೋಟಿ ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ಮಂಗಳವಾರದಂದು ಚಾಲನೆ ನೀಡಿದರು.

ಭಾಟನಾಗನೂರ ಬೋರಗಾಂವವಾಡಿ ರಸ್ತೆ (ರಾಜಿ-98)ಯ ಕಿ.ಮೀ 35.38 ರಿಂದ 38.00 ವರೆಗಿನ (ಬೋರಗಾಂವವಾಡಿ ಕ್ರಾಸ್‌ನಿಂದ ಬೋರಗಾಂವ ವೃತ್ತದವರೆಗೆ) ರಸ್ತೆಯ ದುರಸ್ತಿ ಮತ್ತು ಸುಧಾರಣಾ ಕಾರ್ಯಕ್ಕೆ ಸಂಸದರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬೋರಗಾಂವ್ ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿದ ಪ್ರಿಯಾಂಕ ಜಾರಕಿಹೊಳಿ, ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿದರು. ನಂತರ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮುಖಂಡ ಉತ್ತಮ ಪಾಟೀಲ, ಬೋರಗಾಂವ್ ಪಟ್ಟಣ ಪಂಚಾಯಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಈ ಕಾಮಗಾರಿಯು ಕ್ಷೇತ್ರದ ಜನರಿಗೆ ಉತ್ತಮ ಸಂಪರ್ಕ ಒದಗಿಸುವಲ್ಲಿ ಸಹಕಾರಿಯಾಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ADVERTISEMENT