
ನವಲಗುಂದ: ನವಲಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗಾಗಿ ಉಚಿತ ಬ್ಯಾಂಕಿಂಗ್ ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಅರ್ಜಿ ಸಲ್ಲಿಸಲು ಜನವರಿ 18 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಶಾಂಭವಿ ವಿನೋದ ಅಸೂಟಿ ಟ್ರಸ್ಟ್ ನವಲಗುಂದ ಹಾಗೂ ಧಾರವಾಡದ ಟ್ರ್ಯಾಕ್ ಇಟ್ ಅಕಾಡೆಮಿ (Track It Academy) ಸಹಯೋಗದೊಂದಿಗೆ ಈ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಬ್ಯಾಂಕಿಂಗ್, ಎಸ್.ಎಸ್.ಸಿ (SSC), ಅಗ್ನಿವೀರ್ ಹಾಗೂ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ.
ತರಬೇತಿಯ ವಿಶೇಷತೆಗಳು:
ನುರಿತ ಶಿಕ್ಷಕರಿಂದ ಪ್ರತಿದಿನ 4 ಗಂಟೆಗಳ ಕಾಲ ಉಚಿತ ಆನ್‌ಲೈನ್ ತರಗತಿಗಳು ನಡೆಯಲಿವೆ. ಬೋಧನೆಯು ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಇರಲಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ತರಬೇತಿಯ ಜೊತೆಗೆ ಸ್ಪರ್ಧಾ ಆಕಾಂಕ್ಷಿಗಳಿಗೆ ಪ್ರತಿ ವಾರ ಮಾದರಿ ಪರೀಕ್ಷೆ ನಡೆಸಲಾಗುತ್ತದೆ ಹಾಗೂ ಸಂಪೂರ್ಣ ಪಿಡಿಎಫ್ (PDF) ನೋಟ್ಸ್ ಒದಗಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ಎಲ್ಲಿ?:
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಇದೇ ತಿಂಗಳ 18 ರವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು ನವಲಗುಂದ ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿರುವ ಶಂಕರ ಕಾಲೇಜು ಸಮೀಪದ ಕಾಂಗ್ರೆಸ್ ಯುವ ಮುಖಂಡ ವಿನೋದ ಅಸೂಟಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಅರ್ಜಿಯನ್ನು ಪಡೆದು, ಅಲ್ಲಿಯೇ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ:
8431437299, 8431487299, 8892419299

