
ನವಲಗುಂದ: ಪಟ್ಟಣದ ಬಸವೇಶ್ವರ ನಗರದಲ್ಲಿ ಬಂಜಾರ ಸಮಾಜದ ವತಿಯಿಂದ ಸಂತ ಸೇವಾಲಾಲ್ ಮಹಾರಾಜ ಅವರ ಜಯಂತಿಯನ್ನು ಅತ್ಯಂತ ಭಕ್ತಿಭಾವ ಹಾಗೂ ಸಡಗರದಿಂದ ಆಚರಿಸಲಾಯಿತು. ಸಮಾಜದ ಸುಧಾರಕ, ಅಹಿಂಸಾ ಮಾರ್ಗದರ್ಶಕ ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅವರ ತತ್ವ ಆದರ್ಶಗಳನ್ನು ಸ್ಮರಿಸಲಾಯಿತು.
ಈ ಸಮಯದಲ್ಲಿ ಉಪಸ್ಥಿತರಿದ್ದ ಧಾರವಾಡ ಲೋಕಸಭಾ ಅಭ್ಯರ್ಥಿ ಹಾಗೂ ಕೆಪಿಸಿಸಿ ಸದಸ್ಯ ವಿನೋದ ಅಸೂಟಿ ಅವರು ಮಾತನಾಡಿ, ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯಕ್ಕೆ ಮಾತ್ರವಲ್ಲದೆ ಇಡೀ ಸಮಾಜಕ್ಕೆ ಶಿಸ್ತು ಮತ್ತು ಶಾಂತಿಯ ಸಂದೇಶ ನೀಡಿದ ಮಹಾನ್ ಪುರುಷರು ಎಂದು ಗುಣಗಾನ ಮಾಡಿದರು.
ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ರಾಮಣ್ಣ ಲಮಾಣಿ, ಉಮೇಶ ಲಮಾಣಿ, ಸಂತೋಷ ಚವ್ಹಾಣ, ಮಂಜುನಾಥ ನಾಯಕ, ಮುತ್ತು ಲಮಾಣಿ, ಗೋಪಾಲ ಲಮಾಣಿ, ರವಿ ಲಮಾಣಿ, ಲಕ್ಷ್ಮಣ ಲಮಾಣಿ, ಚಂದ್ರು ಲಮಾಣಿ ಸೇರಿದಂತೆ ಬಂಜಾರ ಸಮುದಾಯದ ನೂರಾರು ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

