
ಹರಭಟ್ಟ ಮಹಾವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಆಚರಣೆ: ತ್ಯಾಗ, ಬಲಿದಾನ ಸ್ಮರಿಸಿದ ವಿದ್ಯಾರ್ಥಿಗಳು
ಕುಂದಗೋಳ: ಪಟ್ಟಣದ ಹರಭಟ್ಟ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಮತ್ತು ಭಕ್ತಿ ಭಾವದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ದೇಶಭಕ್ತಿಯನ್ನು ಬಿಂಬಿಸುವ ವಿವಿಧ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಶಿಕ್ಷಣ ಸಮಿತಿಯ ಅಧ್ಯಕ್ಷ ಟಿ. ಎಸ್. ಗೌಡಪ್ಪನವರ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, “ನಮ್ಮ ಹಿರಿಯರು ತಮ್ಮ ತ್ಯಾಗ ಮತ್ತು ಬಲಿದಾನದಿಂದ ನಮಗೆ ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟಿದ್ದಾರೆ. ಅದನ್ನು ನಾವು ಗೌರವಿಸಬೇಕು ಮತ್ತು ಸ್ವಾತಂತ್ರ್ಯದ ಮಹತ್ವವನ್ನು ಎಲ್ಲರೂ ಉಳಿಸಿ ಬೆಳೆಸಿಕೊಂಡು ಹೋಗೋಣ” ಎಂದು ಹೇಳಿದರು.
ಈ ಸಮಯದಲ್ಲಿ ಅವರು ಎಲ್ಲಾ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಭಾಷಣ, ನೃತ್ಯ, ನಾಟಕ ಮತ್ತು ದೇಶಭಕ್ತಿ ಗೀತೆಗಳನ್ನು ಒಳಗೊಂಡ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ವಿದ್ಯಾರ್ಥಿಗಳು ಆಕರ್ಷಕವಾಗಿ ಪಥಸಂಚಲನ ನಡೆಸುವ ಮೂಲಕ ಎಲ್ಲರ ಗಮನ ಸೆಳೆದರು.
ಸಮಾರಂಭದಲ್ಲಿ ಪ್ರಾಚಾರ್ಯರಾದ ಎಲ್. ಎಲ್. ಲಮಾಣಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಶೇಖಣ್ಣ ಬಾಳಿಕಾಯಿ, ಭರಮಣ್ಣ ಸೊರಟೂರ, ಬಸವರಾಜ ಬ್ಯಾಹಟ್ಟಿ, ಎಸ್. ಜಿ. ಅವಾರಿ, ಎಲ್. ಎಸ್. ಕೊನೇರಿ, ಎಂ. ಎ. ಮುಲ್ಲಾ, ಸಿ. ಎಚ್. ಕುದರಿ, ಸಿದ್ದಾರ್ಥ ಕೊಪ್ಪದ, ಎಸ್. ಎನ್. ಬರದೇಲಿ, ಸಿದ್ದಪ್ಪ ಚೂರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಜಿ. ಸಿ. ಹಂಚಿನಾಳ ಅವರು ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆ ಮಾಡಿದರು.

