ಧಾರವಾಡ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ೨೦೨೫-೨೬ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ ಎನ್.ಐ.ಎಸ್ (NIS) ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಎನ್.ಐ.ಎಸ್ ಅಡಿಯಲ್ಲಿ ನಡೆಸಲಾಗುವ ಆರು ವಾರಗಳ ಸರ್ಟಿಫಿಕೇಟ್ ಕೋರ್ಸ್ (Six week Certificate Course), ಪಿ.ಜಿ. ಡಿಪ್ಲೋಮಾ (P.G. Diploma) ಮತ್ತು ಎಂ.ಎಸ್.ಸಿ ಸ್ಪೋರ್ಟ್ಸ್ ಕೋಚಿಂಗ್ (M.S.C Sports Coaching) ತರಬೇತಿ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಈ ಸೌಲಭ್ಯ ಪಡೆಯಬಹುದಾಗಿದೆ.
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಫೆಬ್ರವರಿ ೦೩, ೨೦೨೬ ರೊಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ ೦೮೩೬-೨೪೪೭೪೨೪ ಗೆ ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

