ಡ್ರಗ್ಸ್ ವಿರುದ್ಧ ಗುಡುಗಿದ ನೂತನ ಕಮಿಷನರ್‌ಗೆ ಆರೋಪಿಗಳಿಂದಲೇ ಸನ್ಮಾನ; ಪೊಲೀಸ್ ಕಚೇರಿಗೆ ಪ್ರವೇಶ ಹೇಗೆ? ಸಾರ್ವಜನಿಕ ವಲಯದಲ್ಲಿ ಚರ್ಚೆ
Recent Views 347 ಹುಬ್ಬಳ್ಳಿ-ಧಾರವಾಡ: ಹುಬ್ಬಳ್ಳಿ-ಧಾರವಾಡ ನೂತನ ಪೊಲೀಸ್ ಆಯುಕ್ತರಾಗಿ ಭೂಷಣ್ ಬೋರಸೆ ಅವರು ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಗಾಂಜಾ ಪ್ರಕರಣದ ಆರೋಪಿಯೊಬ್ಬರು ಹಾಗೂ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೊಬ್ಬರು ಆಯುಕ್ತರನ್ನು ಸನ್ಮಾನಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಎನ್‌ಡಿಪಿಎಸ್ ಪ್ರಕರಣದಲ್ಲಿ ಆರೋಪಿ ಎನ್ನಲಾಗಿರುವ ಖೇತ್‌ಸಿಂಗ್ ರಾಜಪುರೋಹಿತ ಅವರು ಪೊಲೀಸ್ ಆಯುಕ್ತರಿಗೆ ಹೂಗುಚ್ಛ ನೀಡಿ ಸನ್ಮಾನಿಸಿರುವುದು ಫೋಟೋದಲ್ಲಿ ಕಂಡುಬಂದಿದೆ. ಇದೇ ವೇಳೆ ಗೌರಿ ಲಂಕೇಶ್ ಕೊಲೆ…

