ಅರ್ಹ ಪದವೀಧರರು ಮತಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿ ವಹಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
Recent Views 66 ಧಾರವಾಡ:ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ, ಧಾರವಾಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಅರ್ಹ ಪದವೀಧರರು ತಮ್ಮ ಹೆಸರುಗಳನ್ನು ಸೇರ್ಪಡೆ ಮಾಡಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ವ್ಯಾಪಕವಾದ ‘ಸ್ವೀಪ್’ (SVEEP) ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಧಾರವಾಡ ಜಿಲ್ಲಾ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಶ್ಚಿಮ ಪದವೀಧರ ಮತಕ್ಷೇತ್ರದ ಮತದಾರರ ನೋಂದಣಿಗೆ ಸಂಬಂಧಿಸಿದ ವಿಡಿಯೋ…

