ರೈತರ ದಾರಿಸಮಸ್ಯೆ ಪರಿಹಾರಕ್ಕೆ ಸರ್ಕಾರದ ಮಹತ್ವದ ಆದೇಶ
Recent Views 31 ಬೆಂಗಳೂರು: ರಾಜ್ಯದ ರೈತರ ಜಮೀನುಗಳಿಗೆ ಸಂಬಂಧಿಸಿದ ಕಾಲುದಾರಿ, ಬಂಡಿದಾರಿ ಹಾಗೂ ದಾರಿಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ದಿಸೆಯಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರೈತರು ತಮ್ಮ ವ್ಯವಸಾಯದ ಉದ್ದೇಶಕ್ಕಾಗಿ ಕೃಷಿ ಸಲಕರಣೆಗಳನ್ನು ಸಾಗಿಸಲು ಬಳಸುವ ದಾರಿಗಳಲ್ಲಿ ಅನೇಕ ಅಡಚಣೆಗಳು ಎದುರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲು ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಹಲವೆಡೆಗಳಲ್ಲಿ ರೈತರು ತಮ್ಮ ಹೊಲಗಳಲ್ಲಿ ಬೆಳೆ…

