ಕಳ್ಳರ ಕೈಚಳಕ: ಹಾವೇರಿ ಜಿಲ್ಲೆಯಲ್ಲಿ ಅಂದಾಜು ಒಂದೂವರೆ ಲಕ್ಷ ರೂ. ಹೆಚ್ಚಿನ ಮೌಲ್ಯದ ಬ್ಯಾರೇಜ್ ಗೇಟ್‌ಗಳ ಕಳ್ಳತನ
Recent Views 22 ಹಾವೇರಿ: ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ದುರುಪಯೋಗಪಡಿಸಿಕೊಂಡಿರುವ ಕಳ್ಳರು, ವರದಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬ್ರಿಡ್ಜ್ ಕಂ ಬ್ಯಾರೇಜ್‌ಗಳ ಕಬ್ಬಿಣದ ಗೇಟ್‌ಗಳನ್ನು ಕಳ್ಳತನ ಮಾಡಿದ್ದಾರೆ. ಹಾವೇರಿ ತಾಲೂಕಿನ ಕೋಳೂರು ಗ್ರಾಮದಲ್ಲಿ ಒಂದುವರೆ ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಸುಮಾರು 98 ಗೇಟ್‌ಗಳನ್ನು ಕದ್ದು ಪರಾರಿಯಾಗಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇಲಾಖೆಯ ನಿರ್ಲಕ್ಷ್ಯವೇ ಕಳ್ಳರ ಕರಾಮತ್ತಿಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಕಳ್ಳತನ ನಡೆದಿರುವುದು…

