ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ: ಚಿರತೆ ದಾಳಿಗೆ ಮಂಡ್ಯ ಮೂಲದ ಯುವಕ ಬಲಿ
Recent Views 42 ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತರೊಬ್ಬರ ಮೇಲೆ ಚಿರತೆ ದಾಳಿ ನಡೆಸಿ ಕೊಂದಿರುವ ದಾರುಣ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಭಕ್ತಾದಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಮೃತರನ್ನು ಮಂಡ್ಯ ಜಿಲ್ಲೆಯ ಚಿರನಹಳ್ಳಿ ಗ್ರಾಮದ ಪ್ರವೀಣ್ (30) ಎಂದು ಗುರುತಿಸಲಾಗಿದೆ. ಮೃತ ಪ್ರವೀಣ್ ಅವರು ಮಂಡ್ಯದ ಚಿರನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮದ ನೂರಾರು ಸ್ನೇಹಿತರೊಂದಿಗೆ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದರು. ಮಂಗಳವಾರ ರಾತ್ರಿ ಬೆಟ್ಟದ ತಪ್ಪಲಿನ…

