ಗಣತಿ ಕಾರ್ಯ ನಿರ್ಲಕ್ಷ್ಯ: ಹು-ಧಾ ಪಾಲಿಕೆಯ ಇಬ್ಬರು ಸಿಬ್ಬಂದಿ ಅಮಾನತು
Recent Views 12 ಹುಬ್ಬಳ್ಳಿ-ಧಾರವಾಡ: ಮಹಾನಗರ ಪಾಲಿಕೆ (ಎಚ್‌ಡಿಎಂಸಿ) ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಕಾರ್ಯದಲ್ಲಿ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪ ತೋರಿದ ಇಬ್ಬರು ಪಾಲಿಕೆ ಸಿಬ್ಬಂದಿಯನ್ನು ಆಯುಕ್ತ ಡಾ. ರುದ್ರೇಶ್ ಗಾಲಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಸೋಮವಾರ ಸಂಜೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗಣತಿ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿದ ಆಯುಕ್ತರಿಗೆ, ಈ ಇಬ್ಬರು ನೌಕರರು ವಹಿಸಿದ ಸಮೀಕ್ಷಾ ಕೆಲಸದಲ್ಲಿ ಬೇಜವಾಬ್ದಾರಿತನ ಪ್ರದರ್ಶಿಸಿರುವುದು ಕಂಡುಬಂದಿದೆ….

