ಧಾರವಾಡ | ಕಾಮಗಾರಿ, ಕಾರ್ಯಕ್ರಮಗಳಲ್ಲಿ ಪಾರದರ್ಶಕತೆ, ಗುಣಮಟ್ಟ ಕಾಪಾಡಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Recent Views 22 ಧಾರವಾಡ:ಕೇಂದ್ರ ಸರ್ಕಾರವು ವಿವಿಧ ಮಂತ್ರಾಲಯಗಳ ಅಡಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ವಿವಿಧ ಕಾಮಗಾರಿ ಮತ್ತು ಕಾರ್ಯಕ್ರಮಗಳ ಸಮಪರ್ಕ ಅನುಷ್ಠಾನಕ್ಕಾಗಿ ಅನುದಾನ ಬಿಡುಗಡೆ ಮಾಡುತ್ತದೆ. ಇದರಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟವನ್ನು ಕಾಪಾಡಬೇಕು. ಅನುದಾನ ಸದ್ಬಳಕೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ-ದಿಶಾ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡುತ್ತಾ, ಕೇಂದ್ರ ಪುರಸ್ಕೃತ ಯೋಜನೆಗಳಡಿ ನಿರ್ಮಾಣವಾಗಿರುವ ಕಾಮಗಾರಿ, ಕಟ್ಟಡಗಳನ್ನು ಉದ್ಘಾಟಿಸುವಾಗ…

