‘ಉದ್ಯಮಿಗಳಿಗೆ ಧಮ್ಕಿ ಹಾಕಲು ಡಿಸಿಎಂ ಆಗಿದ್ದೀರಾ?’: ಡಿ.ಕೆ.ಶಿವಕುಮಾರ್‌ಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು
Recent Views 11 ಬೆಂಗಳೂರು (ಸೆ.19): ಉದ್ಯಮಿಗಳಿಗೆ ಬೆದರಿಕೆ ಹಾಕಿ ಬೆಂಗಳೂರು ತೊರೆಯುವಂತೆ ಮಾಡುವುದಕ್ಕಾಗಿಯೇ ಉಪಮುಖ್ಯಮಂತ್ರಿಯಾಗಿದ್ದೀರಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿರುವ ಉದ್ಯಮಿಗಳಿಗೆ ಆತ್ಮವಿಶ್ವಾಸ ತುಂಬುವ ಬದಲು ಧಮ್ಕಿ ಹಾಕುವ ಪ್ರವೃತ್ತಿಯನ್ನು ಬದಲಿಸಿಕೊಳ್ಳಿ ಎಂದು ಕಿಡಿಕಾರಿದರು. ತೆರಿಗೆ ನೀಡಿದರೂ ಸೌಲಭ್ಯಗಳಿಲ್ಲಉಪಮುಖ್ಯಮಂತ್ರಿಗಳೇ, ಬೆಂಗಳೂರಿನ ನಾಗರಿಕರ ಕೊಡುಗೆ ರಾಜ್ಯಕ್ಕೆ ಸಾಕಷ್ಟಿದೆ. ಆದರೆ ಅವರಿಗೆ ನೀವು ಕೊಡುತ್ತಿರುವ ಮೂಲಭೂತ ಸೌಕರ್ಯಗಳಾದರೂ ಏನು? ನೀರು, ಹಾಲು, ಮೆಟ್ರೋ ದರ…

