ಸೆ-19 ರಂದು ಹುಬ್ಬಳ್ಳಿ ನೆಹರು ಮೈದಾನದಲ್ಲಿ ನಡೆಯುವ ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ: ತಾಲೂಕು ಅಧ್ಯಕ್ಷ ಉಮೇಶ ಹೆಬಸೂರ
Recent Views 8 ಕುಂದಗೋಳ: ಸೆಪ್ಟೆಂಬರ್ 19ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯಲಿರುವ ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕು ಎಂದು ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ ಹೆಬಸೂರ ಹೇಳಿದರು. ಪಟ್ಟಣದ ಕಲ್ಯಾಣಪುರ ಮಠದಲ್ಲಿ ಮಂಗಳವಾರ ಏಕತಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ನಾಡಿನ ಪಂಚಪೀಠ ಶ್ರೀಗಳು, ವಿರಕ್ತ ಮಠಗಳ ಶ್ರೀಗಳು ಹಾಗೂ ಜಗದ್ಗುರುಗಳು ಈ ಸಮಾವೇಶದಲ್ಲಿ ಭಾಗವಹಿಸಿ ಸಮಾಜಕ್ಕೆ ಮಾರ್ಗದರ್ಶನ ನೀಡಲಿದ್ದಾರೆ. ಶಿರಹಟ್ಟಿಯ…

