ಮಕ್ಕಳ ಆತ್ಮವಿಶ್ವಾಸ ವೃದ್ಧಿಗೆ ನಾಟಕ ಮತ್ತು ಕಲೆ ಪೂರಕ: ಕೆ.ಎಚ್. ನಾಯಕ ಅಭಿಮತ
Recent Views 64 ಧಾರವಾಡ, ಡಿ. 11: ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವಲ್ಲಿ ನಾಟಕ ಮತ್ತು ಕಲೆಗಳು ಅತ್ಯಂತ ಮಹತ್ವದ ಪಾತ್ರ ವಹಿಸುತ್ತವೆ ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕೆ.ಎಚ್. ನಾಯಕ ಅವರು ಅಭಿಪ್ರಾಯಪಟ್ಟರು. ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಮಾರಿಯಾ ಗ್ರಾಮೀಣ ಮಹಿಳಾ ಮತ್ತು ಮಕ್ಕಳ ಸಾಂಸ್ಕೃತಿಕ ಸಂಘದ ವತಿಯಿಂದ ಆಯೋಜಿಸಲಾಗಿದ್ದ ‘ಮಕ್ಕಳ ಹಬ್ಬ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ವೇದಿಕೆಯ ಮೇಲೆ ಹೆಜ್ಜೆ ಹಾಕಿದಾಗ ಅಥವಾ ಬಣ್ಣದ ಕುಂಚ ಹಿಡಿದಾಗ, ಯಾವುದೇ…

