ಬೆಳಗಾವಿಯಲ್ಲಿ ಭಾರೀ ಮಳೆ: 8 ತಾಲ್ಲೂಕುಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Recent Views 10 ಬೆಳಗಾವಿ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಾಳೆ, ಆಗಸ್ಟ್ 19 ರಂದು, ಜಿಲ್ಲೆಯ ಎಂಟು ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ, ರಾಮದುರ್ಗ, ಖಾನಾಪುರ, ಚಿಕ್ಕೋಡಿ ಮತ್ತು ಹುಕ್ಕೇರಿ ತಾಲ್ಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ…

