ಯರಗುಪ್ಪಿಯಲ್ಲಿ ವಾಣಿಜ್ಯ ಸಿಲಿಂಡರ್ ಸ್ಪೋಟ: ಅಂದಾಜು 6 ಲಕ್ಷ ರೂ. ಮೌಲ್ಯದ ಹೋಟೆಲ್ ಸಾಮಗ್ರಿ ಸುಟ್ಟು ಭಸ್ಮ
Recent Views 50 ಕುಂದಗೋಳ: ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಮಧ್ಯರಾತ್ರಿ ವಾಣಿಜ್ಯ ಬಳಕೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಭಾರಿ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಯರಗುಪ್ಪಿ ಗ್ರಾಮದ ಸಂಜೀವರೆಡ್ಡಿ ತಹಶೀಲ್ದಾರ್ ಎಂಬುವವರಿಗೆ ಸೇರಿದ ಹೋಟೆಲ್‌ನಲ್ಲಿ ಈ ದುರ್ಘಟನೆ ನಡೆದಿದೆ. ಮಧ್ಯರಾತ್ರಿಯ ವೇಳೆಗೆ ಹೋಟೆಲ್‌ನ ಒಳಗಿದ್ದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಹೋಟೆಲ್‌ನ ಶೆಟರ್ ಮುರಿದು ಹೋಗಿದ್ದು, ಒಳಭಾಗದಲ್ಲಿದ್ದ ಎಲ್ಲ ಸಾಮಗ್ರಿಗಳು…

