ಧಾರವಾಡದಲ್ಲಿ ಡಿ. 23 ರಂದು ಜಿಲ್ಲಾಮಟ್ಟದ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
Recent Views 30 ಧಾರವಾಡ: ಕೃಷಿ ಇಲಾಖೆಯ ವತಿಯಿಂದ ಆಯೋಜಿಸಲಾಗುತ್ತಿರುವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025-26 ರ ಪೂರ್ವಭಾವಿಯಾಗಿ ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ (Land Races Products) ಪಾಕ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯಮಟ್ಟದ ಸ್ಪರ್ಧೆಗೆ ಪೂರಕವಾಗಿ ನಡೆಯುತ್ತಿರುವ ಈ ವಿಶಿಷ್ಟ ಸ್ಪರ್ಧೆಯು ಡಿಸೆಂಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಧಾರವಾಡ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜರುಗಲಿದೆ. ಪೌಷ್ಟಿಕಾಂಶಯುಕ್ತ ಸಿರಿಧಾನ್ಯಗಳ ಬಳಕೆ ಹಾಗೂ ನಮ್ಮ ಸಾಂಪ್ರದಾಯಿಕ ಆಹಾರ ಪದ್ಧತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ…

