11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ ಹುಬ್ಬಳ್ಳಿ ಗ್ರಾಮೀಣ ಪೊಲೀಸರಿಂದ ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ
Recent Views 14 ಹುಬ್ಬಳ್ಳಿ: ಕಳೆದ ಹನ್ನೊಂದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಇನ್‌ಸ್ಪೆಕ್ಟರ್ ಮುರುಗೇಶ ಚನ್ನಣ್ಣವರ ನೇತೃತ್ವದ ತಂಡವು ಈ ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿದೆ. ಬಂಧಿತ ಆರೋಪಿಯನ್ನು ತಾಲ್ಲೂಕಿನ ಬುಡರಸಿಂಗಿ ಗ್ರಾಮದ ಪ್ರಕಾಶ ಸಾತಪ್ಪ ಹಂಚಿನಮನಿ ಎಂದು ಗುರುತಿಸಲಾಗಿದೆ. ಈತ ತನ್ನ ಕುಟುಂಬದವರಿಗೂ ಸುಳಿವು ಸಿಗದಂತೆ ತಲೆಮರೆಸಿಕೊಂಡಿದ್ದ. ತನ್ನ ಹೆಸರಿನಲ್ಲಿ ಯಾವುದೇ ಸಿಮ್ ಕಾರ್ಡ್ ಬಳಸದೆ, ಬೇರೆಯವರ ಮೊಬೈಲ್ ಸಂಖ್ಯೆಗಳನ್ನು ಪಡೆದು ಪೊಲೀಸರ ಕಣ್ತಪ್ಪಿಸಿಕೊಂಡಿದ್ದ….

