ವಿಶ್ವಕಪ್ ಇತಿಹಾಸದಲ್ಲೇ ಭಾರತದ ಐತಿಹಾಸಿಕ ಜಯ: ಕಿವೀಸ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ತವರು ನೆಲದಲ್ಲಿ ಕಪ್ ಎತ್ತಿ ಹಿಡಿದ ಸೂರ್ಯಕುಮಾರ್ ಪಡೆ
Recent Views 67 ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ20 ವಿಶ್ವಕಪ್ 2026ರ ರೋಚಕ ಫೈನಲ್ ಪಂದ್ಯದಲ್ಲಿ, ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿ ಭಾರತ ತಂಡ ಐತಿಹಾಸಿಕ ಜಯ ದಾಖಲಿಸಿದೆ. ಈ ಮೂಲಕ ಟೀಮ್ ಇಂಡಿಯಾ ಸತತ ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಲ್ಲದೆ, ಮೂರು ಬಾರಿ ಟಿ20 ವಿಶ್ವಕಪ್ ಗೆದ್ದ ವಿಶ್ವದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಜೊತೆಗೆ, ವಿಶ್ವಕಪ್ ಇತಿಹಾಸದಲ್ಲಿ ಕಿವೀಸ್ ವಿರುದ್ಧದ…

