ನಿರೀಕ್ಷಿತ ಅಂಕ ಬರಲಿಲ್ಲವೆಂದು ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
Recent Views 77 ಹುಬ್ಬಳ್ಳಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾನು ನಿರೀಕ್ಷಿಸಿದಷ್ಟು ಅಂಕಗಳು ಬರಲಿಲ್ಲ ಎಂಬ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಗರದ ಉಣಕಲ್‌ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ವಿದ್ಯಾನಗರದ ಕನಕದಾಸ ಕಾಲೇಜಿನ ವಿದ್ಯಾರ್ಥಿನಿ ಶ್ರಾವಣಿ ಮಾರುತಿ ಕಾಳೆ (18) ಮೃತಪಟ್ಟ ದುರ್ದೈವಿ. ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಶ್ರಾವಣಿ, ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಶೇ. 71 ರಷ್ಟು ಅಂಕಗಳನ್ನು ಪಡೆದಿದ್ದಳು. ಆದರೆ, ಪರೀಕ್ಷೆಯಲ್ಲಿ ನೂರಕ್ಕೆ ನೂರು…

