ವಿಪತ್ತು ನಿರ್ವಹಣೆಯಲ್ಲಿ ತಂಡದ ಸಮನ್ವಯ ಮತ್ತು ಆಧುನಿಕ ಉಪಕರಣಗಳ ಬಳಕೆ ಅತ್ಯಗತ್ಯ: ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ
Recent Views 44 ಧಾರವಾಡ: ವಿಪತ್ತುಗಳು ಆಕಸ್ಮಿಕವಾಗಿ ಸಂಭವಿಸುವುದರಿಂದ ತಕ್ಷಣದ ಸ್ಪಂದನೆ ನೀಡಿ ಜನ-ಜಾನುವಾರುಗಳ ಪ್ರಾಣ ಹಾಗೂ ಆಸ್ತಿಪಾಸ್ತಿಯನ್ನು ರಕ್ಷಿಸಲು ವಿಪತ್ತು ನಿರ್ವಹಣಾ ಅಣುಕು ಪ್ರದರ್ಶನಗಳು ಅತ್ಯಂತ ಸಹಕಾರಿಯಾಗಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ಅಭಿಪ್ರಾಯಪಟ್ಟರು. ರಾಯಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಎಚ್‌ಪಿಸಿಎಲ್ ತೈಲ ಘಟಕದಲ್ಲಿ ಶುಕ್ರವಾರ ಜಿಲ್ಲಾಡಳಿತ, ಮೆ|| ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಹಾಗೂ ವಿಜಯವಾಡದ ಎನ್‌ಡಿಆರ್‌ಎಫ್ ತಂಡದ ಸಂಯೋಗದಲ್ಲಿ ಆಯೋಜಿಸಲಾಗಿದ್ದ ‘ಗ್ಯಾಸ್ ಸೋರಿಕೆ…

