ದೋಷಮುಕ್ತ ಮತದಾರರ ಪಟ್ಟಿಗೆ ಆಗ್ರಹ: ರಾಜ್ಯ ಚುನಾವಣಾ ಆಯುಕ್ತರಿಗೆ ಸಚಿವರ ನಿಯೋಗದಿಂದ ಮನವಿ
Recent Views 56 ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಅತ್ಯಂತ ಪಾರದರ್ಶಕ ಮತ್ತು ದೋಷಮುಕ್ತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಒತ್ತಾಯಿಸಿ ಸಚಿವರು ಹಾಗೂ ಶಾಸಕರನ್ನೊಳಗೊಂಡ ಉನ್ನತ ಮಟ್ಟದ ನಿಯೋಗವು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ಇಂದು ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು ಭೇಟಿ ಮಾಡಿದ ನಿಯೋಗವು, ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯ ಕುರಿತು ಸುದೀರ್ಘ ಚರ್ಚೆ…

