ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕೌಶಲ್ಯಾಭಿವೃದ್ಧಿಗೂ ಒತ್ತು ನೀಡಬೇಕು: ವಿ. ರಶ್ಮಿ ಮಹೇಶ್
Recent Views 51 ನಾಗಮಂಗಲ, ಸೆ.23: ಶಿಕ್ಷಣವು ಕೇವಲ ಪಠ್ಯಾಧಾರಿತವಾಗಿರದೆ, ವಿದ್ಯಾರ್ಥಿಗಳಲ್ಲಿ ಕೌಶಲ್ಯ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವಂತಿರಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಕೌಶಲ್ಯಾಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಸಲಹೆ ನೀಡಿದರು. ನಾಗಮಂಗಲ ತಾಲ್ಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣಕ್ಕೆ ಪ್ರಮುಖ ಸ್ಥಾನವಿದ್ದು,…
