
ಧಾರವಾಡ ನ.19: ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ನವೆಂಬರ್ 20 ರಿಂದ 22, 2025 ರವರೆಗೆ ಧಾರವಾಡ ಪೊಲೀಸ್ ಹೆಡ್‌ಕ್ವಾರ್ಟರ್ಸ್‌ನ ಡಿಎಆರ್ ಕೇಂದ್ರಸ್ಥಾನದ ಪರೇಡ್ ಮೈದಾನದಲ್ಲಿ ಭವ್ಯವಾಗಿ ನಡೆಸಲಾಗುತ್ತಿದೆ.
ನವೆಂಬರ್ 20ರಂದು ಬೆಳಿಗ್ಗೆ 8:30ಕ್ಕೆ ಇದೇ ಪರೇಡ್ ಮೈದಾನದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್. ಭಾರತಿ ಅವರು ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕ್ರೀಡಾ ಸ್ಪರ್ಧೆಗಳು ಜರುಗಲಿದ್ದು, ಜಿಲ್ಲೆಯ ವಿವಿಧ ವಿಭಾಗಗಳ ಪೊಲೀಸ್ ಸಿಬ್ಬಂದಿ ಭಾಗವಹಿಸಲಿದ್ದಾರೆ.
ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವು ನವೆಂಬರ್ 22ರಂದು ಸಂಜೆ 4:30ಕ್ಕೆ ಅದೇ ಸ್ಥಳದಲ್ಲಿ ನೆರವೇರುವುದಾಗಿದೆ. ಸಮಾರೋಪ ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಬಹುಮಾನ ವಿತರಕರಾಗಿ ಬೆಳಗಾವಿ ಉತ್ತರ ವಲಯದ ಆರಕ್ಷಕ ಮಹಾನಿರೀಕ್ಷಕ ಡಾ. ಚೇತನ್ ಸಿಂಗ್ ರಾಠೋರ್ ಅವರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

