ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿ ಗರ್ಭಿಣಿ ಕಾಡಾನೆಯ ಕಳೇಬರ ಪತ್ತೆ; ಮಸ್ತಿಗೆ ಬಂದ ಆನೆಯ ದಾಳಿಗೆ ಸಾವು ಶಂಕೆ!

Spread the love

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಯಲ್ಲಿ ಗರ್ಭಿಣಿ ಕಾಡಾನೆಯ ಕಳೇಬರ ಪತ್ತೆಯಾಗಿದ್ದು, ಅರಣ್ಯ ವಲಯದಲ್ಲಿ ದಾರುಣ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟ ವಲಯದ ಅರಣ್ಯ ಗಡಿಯಿಂದ ಸುಮಾರು 150 ಮೀಟರ್ ದೂರದಲ್ಲಿರುವ ಖಾಸಗಿ ಜಮೀನಿನ ಸರ್ವೇ ನಂ. 155ರಲ್ಲಿ ಸುಮಾರು 35 ವರ್ಷ ವಯಸ್ಸಿನ ಹೆಣ್ಣಾನೆಯ ಕಳೇಬರ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ, ನಿಯಮಾನುಸಾರ ಮರಣೋತ್ತರ ಪರೀಕ್ಷೆ ಕೈಗೊಂಡಿದ್ದಾರೆ.

ಮರಣೋತ್ತರ ಪರೀಕ್ಷೆ ವೇಳೆ ಮೃತಪಟ್ಟ ಆನೆಯ ಹೊಟ್ಟೆಯಲ್ಲಿ ಸುಮಾರು ಒಂದು ವರ್ಷದ ಮರಿ ಇರುವುದು ಪತ್ತೆಯಾಗಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಮಸ್ತಿಗೆ ಬಂದ ಮತ್ತೊಂದು ಕಾಡಾನೆಯು ಸೊಂಡಿಲಿನಿಂದ ಬೆನ್ನಿನ ಭಾಗಕ್ಕೆ ಬಲವಾಗಿ ಹೊಡೆದ ಪರಿಣಾಮ ಮೂಳೆ ಮುರಿದು ಆನೆ ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆನೆಯ ಸಾವಿಗೆ ನಿಖರವಾದ ಕಾರಣ ತಿಳಿಯಲು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *