
ಧಾರವಾಡ: ಸಾರ್ವಜನಿಕರ ಸಹಕಾರ ಸಿಕ್ಕಿದಲ್ಲಿ ಯಾವುದೇ ಸಮಸ್ಯೆಯನ್ನಾದರೂ ಬಗೆಹರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಶ್ರೀಮತಿ ದಿವ್ಯಾಪ್ರಭು ಅವರು ಅಭಿಪ್ರಾಯಪಟ್ಟರು.
ನಗರದಲ್ಲಿ ಹುಬ್ಬಳ್ಳಿ ಧಾರವಾಡ ನಾಗರಿಕ ಪರಿಸರ ಸಮಿತಿ ಆಯೋಜಿಸಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಹಬ್ಬಗಳು, ಸಂಸ್ಕೃತಿ ಮತ್ತು ಸಂಪ್ರದಾಯಗಳು ಸಮಾಜದ ನಾಗರಿಕತೆಯ ಹೆಚ್ಚಳಕ್ಕೆ ಕಾರಣವಾಗುತ್ತವೆ. ಅವುಗಳ ಆಚರಣೆ ಮಾಡುವಾಗ ಪರಿಸರಕ್ಕೆ ಹಾನಿಯಾಗದಂತೆ ಎಲ್ಲರೂ ಕಾಳಜಿ ವಹಿಸಬೇಕು. ಸಾರ್ವಜನಿಕರ ಸಹಕಾರದಿಂದಲೇ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಗಣೇಶ ಹಬ್ಬ ಆಚರಿಸಲು ಸಾಧ್ಯವಾಯಿತು.
ಈ ಸನ್ಮಾನ ಸಾರ್ವಜನಿಕರಿಗೆ ಸಲ್ಲಬೇಕಾದ ಸನ್ಮಾನ ಎಂದರು.
ಇದೇ ವೇಳೆ ಸಮಿತಿಯ ಅಧ್ಯಕ್ಷ ಶಂಕರ ಕುಂಬಿಯವರು ಮಾತನಾಡಿ ಅವರು ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಪ್ರಾಮಾಣಿಕ ಪ್ರಯತ್ನದಿಂದ ಪಿ.ಒ.ಪಿ. ಗಣೇಶ ಮೂರ್ತಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಜಿಲ್ಲಾಧಿಕಾರಿಗಳನ್ನು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಪಂಡಿತ ಎಂ. ವೆಂಕಟೇಶಕುಮಾರ್, ಸಮಿತಿಯ ಕಾರ್ಯದರ್ಶಿ ವಿಲಾಸ ಕುಲಕರ್ಣಿ, ಸಹಕಾರ್ಯದರ್ಶಿ ಅಡಿ. ಎಚ್. ನಾಯಕ, ಕೋಶಾಧ್ಯಕ್ಷ ಐ.ಎಲ್. ಪಾಟೀಲ, ಸ್ವಪ್ನ ಕಲಬಶೆಟ್ಟರ್, ಡಾ. ಮಲ್ಲಿಕಾರ್ಜುನ್ ತರ್ಲಘಟ್ಟ, ಡಾ. ಜಗದೀಶ್ ಗುಡಗುರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

