
ಬೆಂಗಳೂರು: ಕರ್ನಾಟಕ ರತ್ನ, ಕನ್ನಡ ನಾಡಿನ ಪ್ರೀತಿಯ ಮನೆ ಮಗ ಶ್ರೀ ಪುನೀತ್ ರಾಜ್ಕುಮಾರ್ ಅವರ ಪ್ರತಿಭೆ, ಸಮಾಜಸೇವೆ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರಿಗೂ ತಲುಪಿಸಲು ಹಾಗೂ ಸ್ಫೂರ್ತಿ ತುಂಬುವ ಉದ್ದೇಶದಿಂದ ಸಿದ್ಧಪಡಿಸಲಾದ ‘PRK’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಅಪ್ಪು ಅವರ ಪತ್ನಿ ಶ್ರೀಮತಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರೊಂದಿಗೆ ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದರು.
”ಪರಮಾತ್ಮ”ನಂತೆ ಬದುಕಿದ ಅಪ್ಪು ಅವರ ಜೀವನದ ಪ್ರತಿಯೊಂದು ಹೆಜ್ಜೆ ಗುರುತುಗಳು PRK ಆ್ಯಪ್ನಲ್ಲಿ ಲಭ್ಯವಾಗಲಿದೆ. ಈ ಮೂಲಕ ಅಪ್ಪು ಅವರು ನಮ್ಮೊಂದಿಗೆ ಸದಾ ಜೀವಂತವಾಗಿರಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಪುನೀತ್ ರಾಜ್ಕುಮಾರ್ ಅವರ ಕಲಾ ಮತ್ತು ಸಾಮಾಜಿಕ ಕೊಡುಗೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ ಈ ಡಿಜಿಟಲ್ ವೇದಿಕೆ ಮಹತ್ವದ ಪಾತ್ರ ವಹಿಸಲಿದೆ.

