ಧಾರವಾಡ: ಜಿಲ್ಲೆಯಲ್ಲಿ ಜಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಡಿಸೆಂಬರ್ 05, 2025 ರಂದು ಜಿಲ್ಲಾ ಮಟ್ಟದ ಸಭೆಯನ್ನು ಆಯೋಜಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಈ ಸಭೆಯು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಸಭೆಗೆ ಪ್ರಾಧಿಕಾರದ ಎಲ್ಲ ಉಪಾಧ್ಯಕ್ಷರು ಮತ್ತು ಸದಸ್ಯರುಗಳು ಕಡ್ಡಾಯವಾಗಿ ಆಗಮಿಸಬೇಕು. ಅಲ್ಲದೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ತೊಡಗಿರುವ ಇಲಾಖೆಯ ಅಧಿಕಾರಿಗಳು ಸಂಬಂಧಿಸಿದ ಮಾಹಿತಿ ಮತ್ತು ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಜಿಲ್ಲಾ ಪಂಚಾಯತ್ ಸಿಇಒ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

