ಧಾರವಾಡ ನ. 06: ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ವಿಭಾಗ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಮಹತ್ವದ ಸ್ಪರ್ಧೆಯು ನವೆಂಬರ್ 10, 2025 ರಂದು ಬೆಳಿಗ್ಗೆ 10:30 ಗಂಟೆಗೆ ಧಾರವಾಡದ ರಾಯಾಪುರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ಜರುಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಮಾಹಿತಿ ತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

