ಧಾರವಾಡ: ಕೇಂದ್ರೀಯ ಸೈನಿಕ ಮಂಡಳಿಯ ವತಿಯಿಂದ ಅಂತರರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಸೇವೆಯಲ್ಲಿರುವ ಸೈನಿಕರ ಮತ್ತು ಮಾಜಿ ಸೈನಿಕರ ಮಕ್ಕಳು ಹಾಗೂ ಅವಲಂಬಿತರಿಗೆ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ವಿದ್ಯಾರ್ಥಿವೇತನ ವಿತರಣಾ ಪ್ರಕ್ರಿಯೆಯು ಪ್ರತಿ ವರ್ಷ ಏಪ್ರಿಲ್ ತಿಂಗಳಿನಿಂದ ಆರಂಭವಾಗಲಿದ್ದು, ಅರ್ಹ ಕ್ರೀಡಾಪಟುಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅಂತರರಾಷ್ಟ್ರೀಯ ಅಥವಾ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿರುವ ಸಾಧಕ ವಿದ್ಯಾರ್ಥಿಗಳು ಮತ್ತು ಅವಲಂಬಿತರು ಸಂಬಂಧಪಟ್ಟ ಕ್ರೀಡಾಕೂಟದ ಪ್ರಮಾಣಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕಿದೆ.
ಅರ್ಜಿ ಸಲ್ಲಿಕೆ ಮತ್ತು ಹೆಚ್ಚಿನ ತಾಂತ್ರಿಕ ಮಾಹಿತಿಗಾಗಿ ಆಸಕ್ತರು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

