ಧಾರವಾಡ; ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (KSTA) ವತಿಯಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ವಿಜ್ಞಾನದಲ್ಲಿ ಆಸಕ್ತಿಯನ್ನು ಮೂಡಿಸುವ ಉದ್ದೇಶದಿಂದ ಪ್ರೌಢಶಾಲಾ ಮತ್ತು ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ವರ್ಷದ ಸ್ಪರ್ಧೆಗಳ ವಿಷಯವು “ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂದಾಗಿದೆ.
ಈ ಸ್ಪರ್ಧೆಗಳನ್ನು ನವೆಂಬರ್ 26, 2025 ರಂದು ಅಕಾಡೆಮಿಯ ಕಛೇರಿಯಲ್ಲಿ ಏರ್ಪಡಿಸಲಾಗಿದ್ದು, ರಾಜ್ಯದ ಎಲ್ಲ ಪ್ರೌಢಶಾಲಾ ಹಾಗೂ ವಿಜ್ಞಾನ ಪದವಿ ವಿದ್ಯಾರ್ಥಿಗಳನ್ನು ಭಾಗವಹಿಸಲು ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ನವೆಂಬರ್ 25, 2025 ರೊಳಗಾಗಿ https://forms.gle/s3x5LMf94ihh7956 ವೆಬ್ಸೈಟ್ ಮೂಲಕ ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ, ಕಾರ್ಯಕ್ರಮದ ಸಂಯೋಜಕ ಹಾಗೂ ವೈಜ್ಞಾನಿಕಾಧಿಕಾರಿ ಶ್ರೀನಿವಾಸು ವಿ.ಕೆ. (ಮೊ. 9020767819) ಅಥವಾ ವೈಜ್ಞಾನಿಕಾಧಿಕಾರಿ ಉಮೇಶ ಘಾಟಗೆ (ಮೊ. 9743084194) ಅವರನ್ನು ಸಂಪರ್ಕಿಸಬಹುದು. ಅಲ್ಲದೆ, ಅಕಾಡೆಮಿಯ ಅಧಿಕೃತ ವೆಬ್ಸೈಟ್ https://kstacademy.in ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

