ಗುರುವಾರ, 26 Nov 2026 | ಕರ್ನಾಟಕ & ರಾಷ್ಟ್ರೀಯ ಸುದ್ದಿ ಪೋರ್ಟಲ್
ಗುರುವಾರ, 26 Nov 2026 ವಿಶ್ವಾಸಾರ್ಹ ಕನ್ನಡ & ರಾಷ್ಟ್ರೀಯ ಸುದ್ದಿ ಜಾಲ
Bangalore

ವೈಜ್ಞಾನಿಕ, ಸುಂದರ ಹಾಗೂ ಮಾದರಿ ನಗರ ನಿರ್ಮಾಣಕ್ಕೆ ಆದ್ಯತೆ: ಸಚಿವ ಬಸವರಾಜ ರಾಯರಡ್ಡಿ.

30-ಸೆಕೆಂಡ್ ಮುಖ್ಯಾಂಶಗಳು (30-Sec AI Summary)
  • ಪ್ರಮುಖ ಬೆಳವಣಿಗೆ: ವೈಜ್ಞಾನಿಕ, ಸುಂದರ ಹಾಗೂ ಮಾದರಿ ನಗರ ನಿರ್ಮಾಣಕ್ಕೆ ಆದ್ಯತೆ: ಸಚಿವ ಬಸವರಾಜ ರಾಯರಡ್ಡಿ.
  • Spread the loveಗದಗ: ಗದಗ-ಬೆಟಗೇರಿ ನಗರವನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿ, ಸುಂದರ ಹಾಗೂ ಮಾದರಿ ನಗರವನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ…
  • ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಸ್ಥಳೀಯ ಮೂಲಗಳಿಂದ ಸಮಗ್ರ ವರದಿ ಪರಿಶೀಲನೆ.
ಸುದ್ದಿ ಆಲಿಸಿ • ಸಿದ್ಧವಾಗಿದೆ (Ready)
AI ಆಡಿಯೋ ನ್ಯೂಸ್‌ರೂಮ್ • ಕನ್ನಡ & English
ವೇಗ:
Spread the love

ಗದಗ: ಗದಗ-ಬೆಟಗೇರಿ ನಗರವನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿ, ಸುಂದರ ಹಾಗೂ ಮಾದರಿ ನಗರವನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರು ಹೇಳಿದರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬುಧವಾರ ನಗರದ ಕಬಾಡರ ಲೇಔಟ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅಂದಾಜು ರೂ.27 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

“ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ರಿಯಾಯಿತಿ ದರದಲ್ಲಿ ಜನರಿಗೆ ಒದಗಿಸುವ ಯೋಜನೆ ಉತ್ತಮ ಕಾರ್ಯವಾಗಿದೆ. ದೇಶದಲ್ಲಿ ನಗರೀಕರಣದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಿಂದೆ ಶೇ.13ರಷ್ಟಿದ್ದ ನಗರವಾಸಿಗಳ ಪ್ರಮಾಣ ಇಂದು ಶೇ.39ಕ್ಕೆ ಏರಿಕೆಯಾಗಿದೆ. ಇದರಿಂದ ನಗರಗಳಲ್ಲಿ ಜನಸಂಖ್ಯೆಯ ಒತ್ತಡ ಹೆಚ್ಚಾಗಿ ಕುಡಿಯುವ ನೀರು, ರಸ್ತೆ, ಒಳಚರಂಡಿ ಸೇರಿದಂತೆ ಮೂಲಸೌಕರ್ಯಗಳ ಅಗತ್ಯವೂ ಹೆಚ್ಚಾಗಿದೆ. ಹೀಗಾಗಿ ವ್ಯವಸ್ಥಿತ ನಗರ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ಬರಗಾಲದ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಹಾಗೂ ಬಡವರು ಸಂಕಷ್ಟ ಎದುರಿಸುತ್ತಿದ್ದಾರೆ. 17-18ನೇ ಶತಮಾನದಲ್ಲಿ ಕಂಡುಬಂದಂತಹ ಭೀಕರ ಬರಗಾಲದ ಪರಿಸ್ಥಿತಿ ಮತ್ತೆ ಎದುರಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ನಮ್ಮ ಮನವಿಗೆ ಸ್ಪಂದಿಸಿ ಗದಗ ಜಿಲ್ಲೆಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಜಿಲ್ಲೆಯನ್ನೂ ಬರಪೀಡಿತವೆಂದು ಘೋಷಿಸಲಾಗಿದೆ.

ಗದಗ ಜಿಲ್ಲೆಗೆ ಮಾಲಿನ್ಯರಹಿತ ಕೈಗಾರಿಕೆಗಳನ್ನು ಆಕರ್ಷಿಸುವ ಮೂಲಕ ಆರ್ಥಿಕ ಅಭಿವೃದ್ಧಿಗೆ ವೇಗ ನೀಡಬೇಕಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸೂಕ್ತ ಯೋಜನೆ ರೂಪಿಸಿ, ಎಲ್ಲ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ತಿಂಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸುತ್ತೇನೆ.

ಅಧಿಕಾರಿಗಳು ಜನರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ವಿಚಾರಗಳಿಗೆ ಮನ್ನಣೆ ನೀಡಬೇಕು. ಅಧಿಕಾರಿಗಳು ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯ ನಿರ್ಲಕ್ಷ್ಯ ಅಥವಾ ಲೋಪ ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

*ಗದಗ ಅಭಿವೃದ್ಧಿಗೆ ಹೊಸ ವೇಗ: ಶಾಸಕ ಎಚ್.ಕೆ. ಪಾಟೀಲ*
ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಗದಗ ನಗರದಲ್ಲಿ ಸುಸಜ್ಜಿತ ವಸತಿ ವಿನ್ಯಾಸ ನಿರ್ಮಿಸಬೇಕೆಂಬ ಬಹುದಿನಗಳ ಕನಸು ಇಂದು ಸಾಕಾರಗೊಳ್ಳುತ್ತಿರುವುದು ಅತ್ಯಂತ ಸಂತಸ ತಂದಿದೆ. 18.19 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲು ರೂ.19.69 ಕೋಟಿ ಅನುದಾನದ ಯೋಜನೆ ರೂಪಿಸಿ ಇಂದು ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಕಚೇರಿ ಕಟ್ಟಡವನ್ನು ಅಂದಾಜು ರೂ.5 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಭೂಮಿಪೂಜೆ ನೆರವೇರಿಸಲಾಗಿದೆ. ಅಲ್ಲದೆ, ಸುಮಾರು 18 ಉದ್ಯಾನವನಗಳನ್ನು ರೂ.4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೂ ಚಾಲನೆ ನೀಡಲಾಗಿದೆ. ಈ ಎಲ್ಲ ಕಾಮಗಾರಿಗಳು ನಿಗದಿತ ಕಾಲಮಿತಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.

ಗದಗ ನಗರ ವೇಗವಾಗಿ ಬೆಳೆಯುತ್ತಿದ್ದು, ಅದರ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಬೇಕಿದೆ. ವೈಜ್ಞಾನಿಕ ಯೋಜನೆಗಳ ಮೂಲಕ ಸುಂದರ ಹಾಗೂ ಸುಸಜ್ಜಿತ ನಗರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಹಾಗೂ ಪ್ರದರ್ಶನ ಪ್ರಾಧಿಕಾರದ ಮೂಲಕ 32 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಗೃಹ ಮಂಡಳಿಯಿಂದಲೂ ಈ ಪ್ರದೇಶದ ಅಭಿವೃದ್ಧಿಗೆ ಪ್ರಯತ್ನಗಳು ನಡೆಯುತ್ತಿವೆ. ಈ ಜಾಗವನ್ನು ಸರ್ಕಾರದ ವಶಕ್ಕೆ ಪಡೆಯಲು ಸಹಕರಿಸಿದ ಅಧಿಕಾರಿಗಳನ್ನು ಅಭಿನಂದಿಸಿದರು.

*2027ರ ಅಂತ್ಯದೊಳಗೆ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ*
ಗದಗ ನಗರದ ಕುಡಿಯುವ ನೀರಿನ ಸಮಸ್ಯೆ ಬಹುದೊಡ್ಡ ಸವಾಲಾಗಿದೆ. ಪ್ರತಿದಿನ ಸುಮಾರು 34 ಲಕ್ಷ ಲೀಟರ್ ನೀರು ಲಭ್ಯವಾಗುತ್ತಿದ್ದರೂ ಸಮರ್ಪಕ ಹಂಚಿಕೆಯಾಗದಿರುವುದು ಸಮಸ್ಯೆಗೆ ಕಾರಣವಾಗಿದೆ. 2027ರ ಅಂತ್ಯದ ವೇಳೆಗೆ ಗದಗ ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವ ನಿರೀಕ್ಷೆಯಿದೆ ಎಂದರು.

ಗದಗ ನಗರವನ್ನು ಮಾದರಿ ನಗರವನ್ನಾಗಿಸುವ ಉದ್ದೇಶದಿಂದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಕುಮಾರವ್ಯಾಸನ ನೆನಪಿನೊಂದಿಗೆ ಪ್ರವಾಸಿಗರು ಗದಗಕ್ಕೆ ಆಗಮಿಸುವಂತಾಗಬೇಕು. ಐತಿಹಾಸಿಕ ಜುಮ್ಮಾ ಮಸೀದಿ ಹಾಗೂ ತ್ರಿಕೂಟೇಶ್ವರ ದೇವಸ್ಥಾನಗಳಿಗೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುವಂತೆ ನಗರದ ಪ್ರವಾಸೋದ್ಯಮ ಅಭಿವೃದ್ಧಿಗೂ ನಗರಾಭಿವೃದ್ಧಿ ಪ್ರಾಧಿಕಾರ ವಿಶೇಷ ಗಮನ ಹರಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ , ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್ , ಜಿಲ್ಲಾ ಪೋಲಿಸವರಿಷ್ಟಾಧಿಕಾರಿ ಮಿಥುನ್, ಗದಗ ಬೆಟಗೇರಿ ನಗರಾಭಿವೃಧ್ದಿ ಪ್ರಾಧಿಕಾರದ ಸದಸ್ಯರು ಬಸವರಾಜ ಎಮ್. ಕಡೇಮನಿ, ಮಲ್ಲಿಕಾರ್ಜುನ ಸಿ.ಐಲಿ, ಬಸವರಾಜ. ಎನ್. ಯರನಾಳ, ಶ್ರೀಮತಿ ಜಾನಕಿ.ಎಸ್. ಮಲ್ಲಾಪೂರ, ಚಂದ್ರಶೇಖರ ತಡಸದ ಹಾಗೂ ಗದಗ ಬೆಟಗೇರಿ ನಗರಸಭೆ ಸದಸ್ಯರು ಹಾಜರಿದ್ದರು.

ADVERTISEMENT