
ಜಿಲ್ಲಾ ಆಸ್ಪತ್ರೆ ಕ್ವಾರ್ಟರ್ಸ್ನಲ್ಲಿ ಬೆಚ್ಚಿ ಬೀಳಿಸಿದ ಘಟನೆ; ಪತಿ ಕೆಲಸಕ್ಕೆ ತೆರಳಿದ್ದಾಗ ದುರಂತ
ಶಿವಮೊಗ್ಗ: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ತಾಯಿಯೊಬ್ಬರು ತಮ್ಮ ಪುತ್ರಿಯನ್ನು ಮಚ್ಚಿನಿಂದ ಕೊಲೆ ಮಾಡಿದ ಬಳಿಕ ತಾವೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿವಮೊಗ್ಗದ ಶರಾವತಿ ನಗರದಲ್ಲಿರುವ ಜಿಲ್ಲಾ ಆಸ್ಪತ್ರೆ ಕ್ವಾರ್ಟರ್ಸ್ನಲ್ಲಿ ಈ ಘಟನೆ ನಡೆದಿದೆ. ಸುಮಾರು 36 ವರ್ಷದ ಶ್ರುತಿ ಎಂಬ ಮಹಿಳೆ ತಮ್ಮ 11 ವರ್ಷದ ಪುತ್ರಿ ಪೂರ್ವಿಕಾಳನ್ನು ಮಚ್ಚಿನಿಂದ ಇರಿದು ಕೊಲೆ ಮಾಡಿದ ನಂತರ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತಿ ರಾಮಣ್ಣ ಅವರು ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ಡ್ಯೂಟಿ ಮುಗಿಸಿ ರಾಮಣ್ಣ ಮನೆಗೆ ಬಂದಾಗ ಈ ದುರಂತ ಬೆಳಕಿಗೆ ಬಂದಿದೆ.
ಮಾನಸಿಕ ಅಸ್ವಸ್ಥತೆ ಶಂಕೆ
ಮೇಲ್ನೋಟಕ್ಕೆ ತಾಯಿ ಶ್ರುತಿ ಅವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿಯೇ ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಈ ಕುರಿತು ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆಯ ನಿಖರ ಕಾರಣಗಳ ಕುರಿತು ತನಿಖೆ ಮುಂದುವರೆದಿದೆ.

