ಭಾನುವಾರ, 22 Nov 2026 | ಕನ್ನಡ & ರಾಷ್ಟ್ರೀಯ ಸುದ್ದಿ ಪೋರ್ಟಲ್
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಚಾಲನೆ: ಪರಿಸರ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ

30-ಸೆಕೆಂಡ್ ಮುಖ್ಯಾಂಶಗಳು (30-Sec AI Summary)
  • ಪ್ರಮುಖ ಬೆಳವಣಿಗೆ: ಮಲೆ ಮಹದೇಶ್ವರ ಬೆಟ್ಟದಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಚಾಲನೆ: ಪರಿಸರ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ
  • Spread the love Recent Views 78 ​ಹನೂರ: ಪವಿತ್ರ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ…
  • ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಸ್ಥಳೀಯ ಮೂಲಗಳಿಂದ ಸಮಗ್ರ ವರದಿ ಪರಿಶೀಲನೆ.
ಸುದ್ದಿ ಆಲಿಸಿ • ಸಿದ್ಧವಾಗಿದೆ (Ready)
AI ಆಡಿಯೋ ನ್ಯೂಸ್‌ರೂಮ್ • ಕನ್ನಡ & English
ವೇಗ:
Spread the love

​ಹನೂರ: ಪವಿತ್ರ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘ಹಸಿರು ನಾಳೆ-ಎಂ.ಎಂ. ಹಿಲ್ಸ್’ (Green Tomorrow – MM Hills) ಅಭಿಯಾನದ ಅಂಗವಾಗಿ ಬುಧವಾರ ಜಿಲ್ಲಾಧಿಕಾರಿ ಶ್ರೀರೂಪ ಅವರು ಘನತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳಿಗೆ ಅಧಿಕೃತವಾಗಿ ಚಾಲನೆ ನೀಡಿದರು.

​ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಮತ್ತು ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಈ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ನೂತನವಾಗಿ ಅಳವಡಿಸಲಾದ ಆಧುನಿಕ ಯಂತ್ರಗಳು ಕಸವನ್ನು ಸಮರ್ಪಕವಾಗಿ ವಿಂಗಡಿಸಲು ಮತ್ತು ವಿಲೇವಾರಿ ಮಾಡಲು ಸಹಕಾರಿಯಾಗಲಿವೆ. ಈ ಯೋಜನೆಯ ಮೂಲಕ ಬೆಟ್ಟದ ನೈಸರ್ಗಿಕ ಸೌಂದರ್ಯವನ್ನು ಕಾಪಾಡುವುದರ ಜೊತೆಗೆ ಯಾತ್ರಾರ್ಥಿಗಳಿಗೆ ಸ್ವಚ್ಛ ಪರಿಸರವನ್ನು ಒದಗಿಸುವ ಗುರಿ ಹೊಂದಲಾಗಿದೆ.

​ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು, ಉಪಕಾರ್ಯದರ್ಶಿ ಚಂದ್ರಶೇಖರ್, ಮೈಕಾಪ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಅಶ್ರಫುಲ್ ಹಸನ್ ಹಾಗೂ ಗ್ರಾಮ ಪಂಚಾಯಿತಿ ಪಿಡಿಒ ಕಿರಣ್ ಉಪಸ್ಥಿತರಿದ್ದರು. ಅಲ್ಲದೆ ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು ಮತ್ತು ಮಂಗಳೂರಿನ ಮಿನಿ ಟೆಕ್ ಸಂಸ್ಥೆಯ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

​ವಿಶೇಷವಾಗಿ ಈ ಯೋಜನೆಯ ಬೆನ್ನೆಲುಬಾಗಿರುವ ಪೌರಕಾರ್ಮಿಕರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಸಮಾರಂಭಕ್ಕೆ ಸಾಕ್ಷಿಯಾದರು. ಈ ಸಾಮೂಹಿಕ ಪ್ರಯತ್ನವು ಮಹದೇಶ್ವರ ಬೆಟ್ಟದ ಸುಸ್ಥಿರ ಅಭಿವೃದ್ಧಿಗೆ ಮತ್ತು ನೈಸರ್ಗಿಕ ಸಮತೋಲನ ಕಾಪಾಡುವಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಲಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT