ಉಕ್ಕುಂದ ಗ್ರಾಮದಲ್ಲಿ ಫೆಬ್ರವರಿ 24 ರಿಂದ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

Spread the love

ರಾಣೇಬೆನ್ನೂರು: ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಫೆಬ್ರವರಿ 24 ರಿಂದ ಫೆಬ್ರವರಿ 27 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ನಾಲ್ಕು ದಿನಗಳ ಕಾಲ ನಡೆಯುವ ಈ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿಯು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

​ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 24 ರಂದು ಬೆಳಿಗ್ಗೆ 6 ಗಂಟೆಗೆ ನಂದಿಧ್ವಜ ಸ್ಥಾಪನೆ ಮತ್ತು ಕಂಕಣ ಕಟ್ಟುವ ಕಾರ್ಯಕ್ರಮ ನೆರವೇರಲಿದೆ. ಇದೇ ವೇಳೆ ನೂತನ ಪುಷ್ಪ ರಥೋತ್ಸವದ ನಿಮಿತ್ತ ವಿಶೇಷ ಹೋಮ-ಹವನ ಹಾಗೂ ರಥಶಾಂತಿ ಪೂಜೆಗಳು ಜರುಗಲಿವೆ. ಅಂದು ಸಂಜೆ 7:30 ಕ್ಕೆ ಆವರಗೋಳ ಪುರವರ್ಗ ಹಿರೇಮಠದ ಓಂಕಾರ ಶಿವಾಚಾರ್ಯ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನೂತನ ಪುಷ್ಪ ರಥೋತ್ಸವಕ್ಕೆ ಕಳಸಾರೋಹಣ ಕಾರ್ಯಕ್ರಮ ನಡೆಯಲಿದೆ.

​ಫೆಬ್ರವರಿ 26 ರಂದು ಬೆಳಿಗ್ಗೆ 11 ಗಂಟೆಗೆ ಪುಷ್ಪ ರಥೋತ್ಸವವು ಸಂಭ್ರಮದಿಂದ ಜರುಗಲಿದ್ದು, ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ 27 ರಂದು ಬೆಳಿಗ್ಗೆ ಗುಗ್ಗಳ ಕಾರ್ಯಕ್ರಮ ಹಾಗೂ ಅಂದು ಸಂಜೆ 4 ಗಂಟೆಗೆ ವೈಭವದ ಮಹಾ ರಥೋತ್ಸವ ಜರುಗಲಿದೆ. ಜಾತ್ರೆಯ ವಿಶೇಷ ಆಕರ್ಷಣೆಯಾಗಿ ಫೆಬ್ರವರಿ 28 ರಿಂದ ಮಾರ್ಚ್ 2 ರವರೆಗೆ ಬೈಲು ಜಂಗೀ ಕುಸ್ತಿ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯು ತಿಳಿಸಿದೆ.

Leave a Reply

Your email address will not be published. Required fields are marked *