ಮಾಲಿನ್ಯ ನಿಯಂತ್ರಣಕ್ಕೆ ವಿದ್ಯಾರ್ಥಿಗಳು ಕೈ ಜೋಡಿಸಲಿ: ಪರಿಸರ ಅಧಿಕಾರಿ ಐ ಎಚ್ ಜಗದೀಶ್ ಕರೆ

Spread the love

ಕುಂದಗೋಳ: : ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ಕಂಕಣಬದ್ಧರಾಗಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ)ಯ ಧಾರವಾಡ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಐ.ಎಚ್. ಜಗದೀಶ್ ಕರೆ ನೀಡಿದರು.
ಅವರು ಮಂಗಳವಾರದಂದು ಸಂಶಿ ಗ್ರಾಮದ ಕೆಎಲ್‌ಇ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ ಮತ್ತು ಕೆಎಲ್‌ಇ ಕಾಲೇಜು ಸಂಶಿ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ‘ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ’ದ ಅಂಗವಾಗಿ ‘ಪರಿಸರ ಜಾಗೃತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರಿಸರ ಸ್ನೇಹಿ ಹಬ್ಬ ಆಚರಣೆ
ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ ಅಧ್ಯಕ್ಷ ಶಂಕರ ಕುಂಬಿ ಮಾತನಾಡಿ, “ಪ್ರತಿಯೊಬ್ಬರೂ ಪರಿಸರ ಸ್ನೇಹಿ ಹಬ್ಬಗಳನ್ನು ಆಚರಿಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು” ಎಂದರು. ಪರಿಸರ ಜಾಗೃತಿಯ ಕುರಿತು ಅತಿಥಿಯಾಗಿದ್ದ ಅಶೋಕ್ ನಾಯಕ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಸಭೆಯ ಅಧ್ಯಕ್ಷತೆಯನ್ನು ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಎ.ಬಿ. ಉಪ್ಪಿನ್ ವಹಿಸಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಚಾರ್ಯ ಪ್ರೊ. ರಮೇಶ್ ವೈ. ಅತ್ತಿಗೇರಿ ನಿರ್ವಹಿಸಿದರು.

Leave a Reply

Your email address will not be published. Required fields are marked *