ಗಾಂಧಿ ಜಯಂತಿಯವರೆಗೆ ‘ಸ್ವಚ್ಛತಾ ಹಿ ಸೇವಾ’ ಅಭಿಯಾನಕ್ಕೆ ಚಾಲನೆ

Spread the love

ಧಾರವಾಡ: ಮಹಾತ್ಮ ಗಾಂಧಿಯವರ ಜನ್ಮದಿನಾಚರಣೆಯ ಪ್ರಯುಕ್ತ ‘ಸ್ವಚ್ಛತಾ ಹಿ ಸೇವಾ’ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಚಾಲನೆ ನೀಡಿದರು. ಸೆಪ್ಟೆಂಬರ್ 17ರಂದು ಆರಂಭವಾಗಿ ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ಮುಕ್ತಾಯಗೊಳ್ಳುವ ಈ 15 ದಿನಗಳ ಅಭಿಯಾನವು ಜಿಲ್ಲಾದ್ಯಂತ ಬೃಹತ್ ಪ್ರಮಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ.

ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ ಮಲ್ಲಿಕಾರ್ಜುನ ತೊದಲಬಾಗಿ ಅವರು, ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ‘ಸ್ವಚ್ಛತಾ ಹಿ ಸೇವಾ’ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಅಭಿಯಾನವು ಸಾವಿರಾರು ಜನರನ್ನು ಒಟ್ಟುಗೂಡಿಸಿ ಸ್ವಚ್ಛತೆಯ ಮಹತ್ವದ ಬಗ್ಗೆ ಅರಿವು ಮೂಡಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಯೋಜನಾಧಿಕಾರಿಗಳು, ವ್ಯವಸ್ಥಾಪಕರು, ಜಿಲ್ಲಾ ಪಂಚಾಯತ್‌ನ ಎಲ್ಲ ಸಿಬ್ಬಂದಿಗಳು ಹಾಗೂ ಸ್ವ-ಸಹಾಯ ಸಂಘದ ಮಹಿಳೆಯರು ಹಾಜರಿದ್ದರು.

Leave a Reply

Your email address will not be published. Required fields are marked *