ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸಿಪಿಐ ಚಿಕ್ಕರಾಜ್ ಶೆಟ್ಟಿ,ರಾಮಪುರದಲ್ಲಿ ಅದ್ದೂರಿ ವಾಲಿಬಾಲ್ ಪಂದ್ಯಾವಳಿ: ವಿಜೇತರಿಗೆ ಬಹುಮಾನ ವಿತರಣೆ
ಹನೂರು: ಯುವಕರು ದುಶ್ಚಟಗಳು ಹಾಗೂ ಮಾದಕ ದ್ರವ್ಯ ಸೇವನೆಯಿಂದ ದೂರವಿದ್ದು, ಕ್ರೀಡೆಗಳತ್ತ ಗಮನ ಹರಿಸಿದರೆ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದು ರಾಮಪುರ ವೃತ್ತ ನಿರೀಕ್ಷಕ ಚಿಕ್ಕರಾಜ್ ಶೆಟ್ಟಿ ಕಿವಿಮಾತು ಹೇಳಿದರು. ತಾಲೂಕಿನ ರಾಮಪುರ ಗ್ರಾಮದ ಇಂದಿರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶ್ರೀ ಬೈಯ್ಯಮ್ಮ ತಾಯಿ ಹಾಗೂ ಆಂಜನೇಯ ಸ್ವಾಮಿ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಪ್ರಥಮ ವರ್ಷದ ವಾಲಿಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು….

