ಕಂಚಾರಗಟ್ಟಿ ಸರ್ಕಾರಿ ಉರ್ದು ಶಾಲೆಗೆ ಶಾಸಕ ರುದ್ರಪ್ಪ ಲಮಾಣಿ ಅವರಿಂದ ಎರಡು ಹೊಸ ಕೊಠಡಿಗಳ ಕೊಡುಗೆ: ಸುವರ್ಣ ಮಹೋತ್ಸವ ಸಡಗರ
ಹಾವೇರಿ: ತಾಲೂಕಿನ ಕಂಚಾರಗಟ್ಟಿ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮವು ಅತ್ಯಂತ ಸಡಗರ ಸಂಭ್ರಮದಿಂದ ಜರುಗಿತು. ಈ ಐತಿಹಾಸಿಕ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕರ್ನಾಟಕ ವಿಧಾನಸಭೆಯ ಉಪಸಭಾಪತಿಗಳು ಹಾಗೂ ಹಾವೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರು ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗಾಗಿ ಹೊಸದಾಗಿ ಎರಡು ಶಾಲಾ ಕೊಠಡಿಗಳನ್ನು ಮಂಜೂರು ಮಾಡಿರುವುದಾಗಿ ಘೋಷಿಸಿ ಗ್ರಾಮಸ್ಥರ ಹರ್ಷಕ್ಕೆ ಕಾರಣರಾದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಅಬ್ದುಲ್…

