ಭಟ್ಕಳ:ಕಪ್ಪೆ ಚಿಪ್ಪು ಆರಿಸಲು ಹೊಳೆಗೆ ಇಳಿದ ಎಂಟು ಮಂದಿ ನೀರುಪಾಲು

ಭಟ್ಕಳ, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪದ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಸಂಭವಿಸಿದ ದಾರುಣ ಘಟನೆಗೆ ಎಂಟು ಮಂದಿ ನೀರುಪಾಲಾಗಿದ್ದಾರೆ. ಕಪ್ಪೆ ಚಿಪ್ಪು ಆರಿಸಲು ಹೊಳೆಗೆ ಇಳಿದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯ ಉಮೇಶ ನಾಯ್ಕ (30), ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ಲಕ್ಷ್ಮಿ ಶಿವರಾಮ ನಾಯ್ಕ (49), ಜ್ಯೋತಿ ನಾಗಪ್ಪ ನಾಯ್ಕ (34),…

Read More

ಮುಂಡಗೋಡ ಮೀಟರ್ ಬಡ್ಡಿ ಕಿಂಗ್‌ಪಿನ್ ಹತ್ಯೆ ರಹಸ್ಯ ಬಯಲು: ಐವರು ಸುಪಾರಿ ಹಂತಕರ ಬಂಧನ, ಪಿಸ್ತೂಲ್ ವಶ

​ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಸಂಚಲನ ಮೂಡಿಸಿದ್ದ ಮೀಟರ್ ಬಡ್ಡಿ ದಂಧೆಯ ಕಿಂಗ್‌ಪಿನ್ ಜಮೀರ್ ಅಹ್ಮದ್ ದರ್ಗಾವಾಲೆ ಕೊಲೆ ಪ್ರಕರಣದ ಸುರುಳಿ ಬಿಚ್ಚಿಕೊಂಡಿದೆ. ಬಡ್ಡಿ ದಂಧೆಯ ವೃತ್ತಿ ವೈಷಮ್ಯಕ್ಕಾಗಿ ಸುಪಾರಿ ನೀಡಿ ಈ ಹತ್ಯೆ ಮಾಡಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನ ನೆಲಮಂಗಲದ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಈ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಮುಂಡಗೋಡಿನ ನಿವಾಸಿ ಮಂಜುನಾಥ ಕಾಜಗಾರ ಅಲಿಯಾಸ್ ಮಂಜ್ಯಾ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮಂಜುನಾಥ ಹಾಗೂ ಮೃತ ಜಮೀರ್…

Read More

​ಯಲ್ಲಾಪುರ: ಅರಬೈಲ್ ಘಟ್ಟದಲ್ಲಿ ಇಥೆನಾಲ್ ಟ್ಯಾಂಕರ್ ಪಲ್ಟಿ; ಬೆಂಕಿಗಾಹುತಿಯಾದ ಲಾರಿ

ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರ ತಿರುವಿನಲ್ಲಿ ಇಥೆನಾಲ್ ತುಂಬಿದ್ದ ಟ್ಯಾಂಕರ್ ಲಾರಿಯೊಂದು ಪಲ್ಟಿಯಾಗಿ ಭೀಕರ ಬೆಂಕಿ ಅನಾಹುತ ಸಂಭವಿಸಿದ ಘಟನೆ ಜ.31ರ ಶನಿವಾರ ಸಂಜೆ ನಡೆದಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಲಾರಿ ಧಗಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾಗಿದೆ. ​ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿ ನಿವಾಸಿ ಶಿವಾನಂದ ಬೀರಾದಾರ್ ಎಂಬುವವರು ಇಥೆನಾಲ್ ತುಂಬಿದ ಟ್ಯಾಂಕರ್ ಅನ್ನು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದರು….

Read More

ಮಾದಕ ವಸ್ತು ತಡೆದಿದ್ದಕ್ಕೆ ಜೈಲರ್‌ ಮೇಲೆ ಖೈದಿಗಳಿಂದ ಮಾರಣಾಂತಿಕ ಹಲ್ಲೆ: ಕಾರವಾರ ಜೈಲಿನಲ್ಲಿ ಭೀಕರ ಘಟನೆ

ಮಾದಕ ವಸ್ತು ತಡೆದಿದ್ದಕ್ಕೆ ಜೈಲರ್‌ ಮೇಲೆ ರೌಡಿಗಳ ಮಾರಣಾಂತಿಕ ಹಲ್ಲೆ: ಕಾರವಾರ ಜೈಲಿನಲ್ಲಿ ಭೀಕರ ಘಟನೆ ಕಾರವಾರ (ಉತ್ತರಕನ್ನಡ): ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಪೂರೈಕೆ ಮತ್ತು ಬಳಕೆಗೆ ಸಂಪೂರ್ಣವಾಗಿ ಕಡಿವಾಣ ಹಾಕಿದ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ಮಂಗಳೂರಿನ ಮೂಲದ ಇಬ್ಬರು ಕುಖ್ಯಾತ ರೌಡಿಗಳು ಜೈಲರ್ ಮತ್ತು ಇತರ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಗಂಭೀರ ಘಟನೆ ಕಾರವಾರದ ಜಿಲ್ಲಾ ಕಾರಾಗೃಹದಲ್ಲಿ ವರದಿಯಾಗಿದೆ. ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಕರ್ತವ್ಯ ನಿರತ ಇತರೆ ಮೂವರು ಸಿಬ್ಬಂದಿ ಮೇಲೆ…

Read More

ಯಲ್ಲಾಪುರ ಅರಬೈಲ್ ಘಟ್ಟದಲ್ಲಿ ಎಥನಾಲ್ ಟ್ಯಾಂಕರ್ ಪಲ್ಟಿ: ಭಾರಿ ಬೆಂಕಿ, ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಯಲ್ಲಾಪುರ, ಉತ್ತರ ಕನ್ನಡ: ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಸಮೀಪದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಾರುತಿ ದೇವಸ್ಥಾನದ ಎದುರು ಶನಿವಾರ ಬೆಳಗಿನ ಜಾವ ಎಥನಾಲ್ (ಸ್ಪಿರಿಟ್) ತುಂಬಿದ ಟ್ಯಾಂಕರ್‌ ಲಾರಿ ಪಲ್ಟಿಯಾಗಿ ಭಾರಿ ಬೆಂಕಿ ಹೊತ್ತಿಕೊಂಡ ದುರ್ಘಟನೆ ಸಂಭವಿಸಿದೆ. ಈ ಘಟನೆ ಪರಿಣಾಮವಾಗಿ ಹೆದ್ದಾರಿಯಲ್ಲಿ ಸಂಪೂರ್ಣ ಸಂಚಾರ ಅಸ್ತವ್ಯಸ್ತಗೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿಯು ಅರಬೈಲ್ ಘಟ್ಟದ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ರಸ್ತೆಯ ಪಕ್ಕಕ್ಕೆ ಪಲ್ಟಿಯಿತು. ಟ್ಯಾಂಕರ್ ಪಲ್ಟಿಯಾದ…

Read More

ದಾಖಲೆ ಇಲ್ಲದೆ ಖಾಸಗಿ ಬಸ್‌ನಲ್ಲಿ ಸಾಗಿಸುತ್ತಿದ್ದ 1.99 ಕೋಟಿ ರೂ. ನಗದು ವಶ

ಕಾರವಾರ: ದಾಖಲೆ ಇಲ್ಲದೆ ಖಾಸಗಿ ಬಸ್‌ನಲ್ಲಿ ಸಾಗಿಸಲಾಗುತ್ತಿದ್ದ ಬರೋಬ್ಬರಿ ₹1,99,99,500 ನಗದನ್ನು ತಾಲ್ಲೂಕಿನ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಮಂಗಳವಾರ ನಸುಕಿನ ಜಾವ ಚಿತ್ತಾಕುಲ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ​ಪಣಜಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್‌ನ್ನು ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಈ ಬೃಹತ್ ಮೊತ್ತದ ಹಣ ಪತ್ತೆಯಾಗಿದೆ. ರಾಜಸ್ಥಾನ ಮೂಲದ ಕಲ್ವೇಶ್ ಮತ್ತು ಭಮ್ರುಕುಮಾರ ಎಂಬುವವರು ಈ ಹಣವನ್ನು ಸಾಗಿಸುತ್ತಿದ್ದರು ಎಂದು ಚಿತ್ತಾಕುಲ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ​ಸಾಗಿಸಲಾಗುತ್ತಿದ್ದ ನೋಟಿನ ರಾಶಿಗಳನ್ನು ಎರಡು ಬ್ಯಾಗ್‌ಗಳಲ್ಲಿ ತುಂಬಿಸಿಡಲಾಗಿತ್ತು….

Read More