11 ಲಕ್ಷ ಲಂಚ ಪ್ರಕರಣ: ಅಫಜಲಪುರ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
ಕಲಬುರಗಿ: ಏಳು ವರ್ಷಗಳ ಹಿಂದೆ ಇಡೀ ರಾಜ್ಯದ ಗಮನ ಸೆಳೆದಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಅಫಜಲಪುರದ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಹಾಗೂ ಮಧ್ಯವರ್ತಿ ಶಿವಾನಂದ ಜಮಖಂಡಿ ಅವರಿಗೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತಲಾ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹20 ಸಾವಿರ ದಂಡ ವಿಧಿಸಿ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ಆದೇಶ ಹೊರಡಿಸಿದ್ದಾರೆ. ದಂಡ ಪಾವತಿಸಲು ವಿಫಲರಾದರೆ ಹೆಚ್ಚುವರಿ ಜೈಲು…

