ಸೊಬಗಿನ ‘ಆರಿ’ ಕಲೆ ಕಲಿತ ಗ್ರಾಮೀಣ ಮಹಿಳೆಯರು: ಭಾಗ್ಯನಗರದಲ್ಲಿ 10 ದಿನಗಳ ಉಚಿತ ತರಬೇತಿ ಶಿಬಿರದ ಯಶಸ್ವಿ ಸಮಾರೋಪ

​ ಕೊಪ್ಪಳ: ಮಹಿಳೆಯರು ಮನೆಯಲ್ಲಿ ಕುಳಿತು ಮೊಬೈಲ್‌ನಲ್ಲಿ ಸಮಯ ವ್ಯರ್ಥ ಮಾಡುವ ಬದಲು, ಆರಿ ಕೌಶಲ್ಯದಂತಹ ತರಬೇತಿಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಕೊಪ್ಪಳ ಇನ್ನರ್ ವೀಲ್ ಸಂಸ್ಥೆಯ ಅಧ್ಯಕ್ಷೆ ಸುನೀತಾ ಎಸ್. ಅಂಟ ಕರೆ ನೀಡಿದರು. ನಗರದ ಭಾಗ್ಯನಗರದ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್‌ನಲ್ಲಿ ಸೋಮವಾರ ಆಯೋಜಿಸಲಾಗಿದ್ದ ಗ್ರಾಮೀಣ ಮಹಿಳೆಯರಿಗಾಗಿನ 10 ದಿನಗಳ ಉಚಿತ ‘ಆರಿ ಕೌಶಲ್ಯ ತರಬೇತಿ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಣಿಪಾಲದ T M G ಸುನಿಧಿ…

Read More

ಭಾಗ್ಯನಗರದ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್‌ನಲ್ಲಿ 10 ದಿನಗಳ ಆರಿ ಕೌಶಲ್ಯ ತರಬೇತಿ ಶಿಬಿರಕ್ಕೆ ಚಾಲನೆ

ಕೊಪ್ಪಳ: ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಲು ಕೌಶಲ್ಯ ತರಬೇತಿಗಳು ಅತ್ಯಗತ್ಯ ಎಂದು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಅವರು ಅಭಿಪ್ರಾಯಪಟ್ಟರು. ನಗರದ ಭಾಗ್ಯನಗರದ ಸುಮೇಧ ಫ್ಯಾಷನ್ ಇನ್ಸ್ಟಿಟ್ಯೂಟ್‌ನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಗ್ರಾಮೀಣ ಮಹಿಳೆಯರಿಗಾಗಿನ 10 ದಿನಗಳ ಆರಿ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಆರಿ ಕೌಶಲ್ಯವನ್ನು ಕರಗತ ಮಾಡಿಕೊಂಡರೆ ತಮ್ಮ ಸಂಸಾರದ ಖರ್ಚು-ವೆಚ್ಚಗಳನ್ನು ಸರಿದೂಗಿಸಲು ಮತ್ತು ಆರ್ಥಿಕವಾಗಿ ಸ್ವತಂತ್ರರಾಗಲು ಸಾಧ್ಯವಾಗುತ್ತದೆ. ಇಂತಹ ಸುಸಂದರ್ಭಗಳನ್ನು ಪ್ರತಿಯೊಬ್ಬ ಮಹಿಳೆಯೂ…

Read More

ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಪ್ರವಾಸಿಗನ ಕೊಲೆ ಪ್ರಕರಣ: ಕೊಪ್ಪಳದ ಮೂವರು ಕಾಮುಕರಿಗೆ ಮರಣದಂಡನೆ ಶಿಕ್ಷೆ

​ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ನಡೆದಿದ್ದ ವಿದೇಶಿ ಪ್ರವಾಸಿ ಮಹಿಳೆ ಹಾಗೂ ಹೋಂ ಸ್ಟೇ ಒಡತಿಯ ಮೇಲಿನ ಅತ್ಯಾಚಾರ ಮತ್ತು ಒಡಿಶಾ ಮೂಲದ ಪ್ರವಾಸಿಗನ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷೆನ್ಸ್ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಮೂವರು ಅಪರಾಧಿಗಳಿಗೆ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಗಂಗಾವತಿಯ ಸಾಯಿನಗರದ ನಿವಾಸಿಗಳಾದ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಅಲಿಯಾಸ್ ಚೈತನ್ಯಸಾಯಿ ಹಾಗೂ ಶರಣಪ್ಪ ಅಲಿಯಾಸ್ ಶರಣು…

Read More

ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ದರ್ಶನಾಶೀರ್ವಾದ ಪಡೆದ ನವಲಗುಂದದ ಮುಖಂಡರು

ಕೊಪ್ಪಳ: ದಕ್ಷಿಣದ ಕುಂಭಮೇಳ ಎಂದೇ ಪ್ರಸಿದ್ಧವಾಗಿರುವ ಕೊಪ್ಪಳದ ಗವಿಸಿದ್ದೇಶ್ವರ ಮಠದ ಮಹಾ ಜಾತ್ರಾ ಮಹೋತ್ಸವದ ಅಂಗವಾಗಿ ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಗಣ್ಯರು ಹಾಗೂ ಮುಖಂಡರು ಮಠಕ್ಕೆ ಭೇಟಿ ನೀಡಿ ಗವಿಸಿದ್ದೇಶ್ವರ ಶ್ರೀಗಳ ದರ್ಶನಾಶೀರ್ವಾದ ಪಡೆದರು. ನವಲಗುಂದ ತಾಲ್ಲೂಕಿನ ಅಡ್ನೂರ ಗ್ರಾಮದವರಾದ ಉಚ್ಚ ನ್ಯಾಯಾಲಯದ ಖ್ಯಾತ ನ್ಯಾಯವಾದಿ ಸಿ. ಎಸ್. ಪಾಟೀಲ ಅವರ ನೇತೃತ್ವದಲ್ಲಿ ತೆರಳಿದ್ದ ಮುಖಂಡರ ತಂಡವು, ಶ್ರೀಮಠದ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು. ​ಇದೇ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ…

Read More

ಯಡಿಯಾಪುರದಲ್ಲಿ ಶ್ರೀ ಸಿದ್ದಲಿಂಗೇಶ್ವರ ರಥೋತ್ಸವ ಸಡಗರ: ಭಕ್ತಿಪರವಶರಾದ ಸಾವಿರಾರು ಭಕ್ತರು

ಕುಕನೂರು: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರವಾದ ಯಡಿಯಾಪುರ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗೇಶ್ವರ ದೇವರ ವಾರ್ಷಿಕ ರಥೋತ್ಸವವು ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಧಾರ್ಮಿಕ ವಿಧಿವಿಧಾನ:ರಥೋತ್ಸವದ ನಿಮಿತ್ತ ಶನಿವಾರ ಮುಂಜಾನೆಯಿಂದಲೇ ದೇವಾಲಯದಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಪುಷ್ಪಾಲಂಕಾರ ಹಾಗೂ ರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಗಳ ಭಕ್ತರು ಬೆಳ್ಳಂಬೆಳಗ್ಗೆಯೇ ಆಗಮಿಸಿ ದೇವರ ದರ್ಶನ ಪಡೆದರು. ಭವ್ಯ ರಥೋತ್ಸವ:ಸಂಜೆ ನಡೆದ ರಥೋತ್ಸವಕ್ಕೆ ಆಡನೂರಿನ ಪರಮಪೂಜ್ಯ…

Read More

ಯಡಿಯಾಪುರದಲ್ಲಿ ಶ್ರೀ ಸಿದ್ದಲಿಂಗೇಶ್ವರ ಪಂಚಕಳಸ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ

ಯಡಿಯಾಪುರದಲ್ಲಿ ಶ್ರೀ ಸಿದ್ದಲಿಂಗೇಶ್ವರ ಪಂಚಕಳಸ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಕುಕನೂರ: ತಾಲೂಕಿನ ಯಡಿಯಾಪುರ ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ಪಂಚಕಳಸ ಜಾತ್ರಾ ಮಹೋತ್ಸವವು ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಜರುಗಲಿದ್ದು, ಗ್ರಾಮಸ್ಥರು ಹಾಗೂ ದೇವಸ್ಥಾನ ಸಮಿತಿಯವರು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ. ಜಾತ್ರಾ ಮಹೋತ್ಸವದ ಅಂಗವಾಗಿ ದಿ. 02-01-2026 ರಂದು ಬೆಳಿಗ್ಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕುಂಭ ಮೆರವಣಿಗೆ ನಡೆಯಲಿದ್ದು, ಸಂಜೆ ಸಂಪ್ರದಾಯಬದ್ಧವಾಗಿ ಹುಚ್ಚಯ್ಯ ಎಳೆಯುವ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ಅದೇ ರೀತಿ ದಿ. 03-01-2026 ರಂದು ಶ್ರೀ ಸಿದ್ದಲಿಂಗೇಶ್ವರ ಪಂಚಕಳಸ…

Read More

ದಾರುಣ ಅಂತ್ಯ: ಇಬ್ಬರು ಪುಟ್ಟ ಮಕ್ಕಳೊಂದಿಗೆ ತಾಯಿ ನೇಣಿಗೆ ಶರಣು; ಕೊಪ್ಪಳದ ಬೆಣಕಲ್‌ನಲ್ಲಿ ಘಟನೆ

ಕುಕನೂರ (ಕೊಪ್ಪಳ ಜಿಲ್ಲೆ) ಜೀವನ ನಿರ್ವಹಣೆಯ ಸಮಸ್ಯೆಗಳು ಅಥವಾ ಕೌಟುಂಬಿಕ ಕಾರಣಗಳಿಂದ ಮನನೊಂದ ಮಹಿಳೆಯೊಬ್ಬರು ತಮ್ಮಿಬ್ಬರು ಪುಟ್ಟ ಮಕ್ಕಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅತೀ ದುರಂತ ಘಟನೆ ತಾಲ್ಲೂಕಿನ ಬೆಣಕಲ್ ಗ್ರಾಮದಲ್ಲಿ ಸೋಮವಾರ ನಡೆದಿದೆ. ಈ ಕರುಣಾಜನಕ ಘಟನೆ ಇಡೀ ಗ್ರಾಮದಲ್ಲಿ ಸೂತಕದ ವಾತಾವರಣ ಸೃಷ್ಟಿಸಿದೆ. ​ಮಕ್ಕಳಿಗೆ ನೇಣು ಹಾಕಿ ತಾಯಿ ಆತ್ಮಹತ್ಯೆ: ​ಮೃತ ದುರ್ದೈವಿಗಳನ್ನು ಲಕ್ಷ್ಮವ್ವ ಭಜಂತ್ರಿ (30), ಆಕೆಯ ಪುತ್ರ ರಮೇಶ್ (4) ಮತ್ತು ಪುತ್ರಿ ಜಾಹ್ನವಿ (2) ಎಂದು ಗುರುತಿಸಲಾಗಿದೆ. ಲಕ್ಷ್ಮವ್ವ…

Read More