ತುಂಗಭದ್ರಾ ಜಲಾಶಯ ಮುಂದಿನ 50 ವರ್ಷ ಸುಭದ್ರ: ಮೇ 15ಕ್ಕೆ 33 ಹೊಸ ಕ್ರಸ್ಟ್‌ಗೇಟ್‌ಗಳ ಲೋಕಾರ್ಪಣೆ – ಡಿ.ಕೆ. ಶಿವಕುಮಾರ್
ಹೊಸಪೇಟೆ: ತುಂಗಭದ್ರಾ ಜಲಾಶಯದ 33 ಕ್ರಸ್ಟ್‌ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮುಂದಿನ 50 ವರ್ಷಗಳ ಕಾಲ ಜಲಾಶಯವು ಅತ್ಯಂತ ಸುಭದ್ರವಾಗಿರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ಜಲಾಶಯದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಯೋಜನೆಯಿಂದ ವಿಜಯನಗರ, ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸುಮಾರು 7.5 ಲಕ್ಷ ರೈತರಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಜಲಾಶಯದ ಸುರಕ್ಷತೆ ಹಾಗೂ ರೈತರ…

