ಲಂಚ ಸ್ವೀಕಾರ: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಇಬ್ಬರು ಪಿಎಗಳು ಲೋಕಾಯುಕ್ತ ಬಲೆಗೆ
ಗದಗ: ಗುತ್ತಿಗೆದಾರರೊಬ್ಬರಿಂದ ಲಕ್ಷಾಂತರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಆಪ್ತ ಸಹಾಯಕರನ್ನು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಾಸಕರ ಒಡೆತನದ ಆಸ್ಪತ್ರೆಯಲ್ಲೇ ಈ ಲಂಚದ ವಹಿವಾಟು ನಡೆಯುತ್ತಿದ್ದಾಗ ದಾಳಿ ನಡೆಸಿರುವ ಪೊಲೀಸರು, ಐದು ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಸಂಕದಾಳ ಗ್ರಾಮದಲ್ಲಿ ಅಂದಾಜು ಒಂದು ಕೋಟಿ ರೂಪಾಯಿ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುತ್ತಿಗೆ ನೀಡಲು ಶಾಸಕರು ಗುತ್ತಿಗೆದಾರ…

