ಮೊನ್ನೆ ಸೀಜ್, ನಿನ್ನೆ ರೀ-ಓಪನ್: ಲಕ್ಷ್ಮೇಶ್ವರ ಪುರಸಭೆ ವಾಣಿಜ್ಯ ಮಳಿಗೆಗಳ ವಿವಾದಕ್ಕೆ ಹೊಸ ತಿರುವು
ಲಕ್ಷ್ಮೇಶರ: ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರಿನ ಪುರಸಭೆಯ ವಾಣಿಜ್ಯ ಸಂಕೀರ್ಣದಲ್ಲಿರುವ ಮಳಿಗೆಗಳ ಅವಧಿ ಮುಗಿದಿದ್ದು, ಅವುಗಳನ್ನು ತೆರವುಗೊಳಿಸಿ ಹೊಸದಾಗಿ ಟೆಂಡರ್ ಕರೆದು ಹರಾಜು ಪ್ರಕ್ರಿಯೆ ನಡೆಸಬೇಕು ಎಂದು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಮಂಗಳವಾರ ಹೋರಾಟ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ಸುಮಾರು ಏಳು ಮಳಿಗೆಗಳನ್ನು ಸೀಜ್ ಮಾಡಿದ್ದರು. ಆದರೆ ಬುಧವಾರ ಅದೇ ಮಳಿಗೆಗಳನ್ನು ಮತ್ತೆ ತೆರೆಯಲಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ವಾಣಿಜ್ಯ ಸಂಕೀರ್ಣದಲ್ಲಿರುವ ಕೆಲ ವ್ಯಾಪಾರಸ್ಥರು ಮಳಿಗೆಗಳ ತೆರವು ಕ್ರಮವನ್ನು ಪ್ರಶ್ನಿಸಿ…

