ಬಂಡೀಪುರ: ಅಕ್ರಮ ವಿದ್ಯುತ್ ಸ್ಪರ್ಶದಿಂದ ಹೆಣ್ಣು ಹುಲಿ ಸಾವು; ಆರೋಪಿಗಳು ತಲೆಮರೆಸಿಕೊಂಡಿರುವ ಶಂಕೆ
ಹನೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ಜೋನ್ ವ್ಯಾಪ್ತಿಯ ಪಡಗೂರು ಗ್ರಾಮದ ಬಳಿ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಪಡಗೂರು ವ್ಯಾಪ್ತಿಯಲ್ಲಿ ಹುಲಿ ಸಂಚರಿಸುತ್ತಿರುವ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ, ಅದರ ಚಲನವಲನ ಗಮನಿಸಲು ಥರ್ಮಲ್ ಡ್ರೋನ್ ಬಳಸಿದಾಗ ಖಾಸಗಿ ಜಮೀನೊಂದರಲ್ಲಿ ಹುಲಿ ಅಸ್ವಾಭಾವಿಕವಾಗಿ ಮೃತಪಟ್ಟಿರುವುದು ಕಂಡುಬಂದಿದೆ. ತಕ್ಷಣ ಸ್ಥಳಕ್ಕೆ ಅರಣ್ಯ ಇಲಾಖೆ, ಸೆಸ್ಕಾಂ ಹಾಗೂ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ…

